ಹೈದರಾಬಾದ್: ಉಪ್ಪಳದ ರಾಜೀವಗಾಂಧಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ವಿದ್ಯುತ್ ಸಮಸ್ಯೆ ಇಲ್ಲದೇ ಸಾಂಗವಾಗಿ ನಡೆಯಲಿದೆ ಎಂದು ಕ್ರೀಡಾಂಗಣದ ಅಧಿಕಾರಿಗಳು ಹೇಳಿದ್ದಾರೆ.
ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದ್ದರಿಂದ ಕ್ರೀಡಾಂಗಣಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ನಡೆಯುವುದು ಅನುಮಾನ ಎಂದೇ ಹೇಳಲಾಗಿತ್ತು.
ಕ್ರೀಡಾಂಗಣದ ಅಧಿಕಾರಿಗಳು ಬಾಕಿ ಇರುವ ₹3 ಕೋಟಿ ವಿದ್ಯುತ್ ಬಿಲ್ ಪಾವತಿ ಮಾಡಿದ್ದಾರೆ. ಇದರಿಂದ ಪಂದ್ಯ ಸಾಂಗವಾಗಿ ನಡೆಯಲಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಬಿಲ್ ಪಾವತಿ ಮಾಡದಿರುವುದಕ್ಕೆ ವಿದ್ಯುತ್ ಸರಬರಾಜು ನಿಲ್ಲಿಸಲಾಗಿತ್ತು. ಬಿಲ್ ಪಾವತಿ ಮಾಡಿದ್ದರಿಂದ ಕ್ರೀಡಾಂಗಣಕ್ಕೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತೆಲಂಗಾಣ ವಿದ್ಯುತ್ ಸರಬರಾಜು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.