ADVERTISEMENT

ಅತ್ಯಾಚಾರ: ಆಸ್ಟ್ರೇಲಿಯಾದಲ್ಲಿ ಶ್ರೀಲಂಕಾ ಕ್ರಿಕೆಟ್ ಆಟಗಾರ ಧನುಷ್ಕ ಗುಣತಿಲಕ ಬಂಧನ

ಪಿಟಿಐ
Published 6 ನವೆಂಬರ್ 2022, 3:08 IST
Last Updated 6 ನವೆಂಬರ್ 2022, 3:08 IST
ಧನುಷ್ಕ ಗುಣತಿಲಕ
ಧನುಷ್ಕ ಗುಣತಿಲಕ   

ಸಿಡ್ನಿ: ಅತ್ಯಾಚಾರದ ಆರೋಪದ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದಾರೆ.

ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.

ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನುಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.