
ದಸುನ್ ಶನಾಕ
ಕೊಲಂಬೊ: ಆಲ್‌ರೌಂಡರ್ ದಸುನ್ ಶನಾಕ ಅವರು ಶ್ರೀಲಂಕಾ ತಂಡದ ನಾಯಕತ್ವವನ್ನು ಮರಳಿ ಪಡೆದಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯು (ಎಸ್‌ಎಲ್‌ಸಿ) ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ 25 ಆಟಗಾರರ ತಂಡವನ್ನು ಶುಕ್ರವಾರ ಪ್ರಕಟಿಸಿದ್ದು, ಚರಿತ್ ಅಸಲಂಕಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದೆ.
ಅಸಲಂಕಾ ಅವರ ಕಳಪೆ ಬ್ಯಾಟಿಂಗ್ ಫಾರ್ಮ್ ಹಾಗೂ ಶನಾಕ ಅವರು ಈ ಹಿಂದಿನ ವಿಶ್ವಕಪ್ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸಿರುವ ಅನುಭವದ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಸ್‌ಎಲ್‌ಸಿಯ ಆಯ್ಕೆ ಸಮಿತಿಯ ಮುಖ್ಯಸ್ಥ ಪ್ರಮೋದಯ ವಿಕ್ರಮಸಿಂಘ ಹೇಳಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ನವೆಂಬರ್ 11ರಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 9 ಮಂದಿ ಸಾವಿಗೀಡಾಗಿದ್ದರು. ಬೆನ್ನಲ್ಲೇ, ನಾಯಕ ಅಸಲಂಕಾ ನೇತೃತ್ವದಲ್ಲಿ ಶ್ರೀಲಂಕಾ ತಂಡದ ಕೆಲವು ಆಟಗಾರರು ಪಾಕ್ ಪ್ರವಾಸವನ್ನು ಮೊಟಕುಗೊಳಿಸಿ, ಸ್ವದೇಶಕ್ಕೆ ಮರಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.