ADVERTISEMENT

IND vs SL 2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 10:06 IST
Last Updated 20 ಜುಲೈ 2021, 10:06 IST
ಶ್ರೀಲಂಕಾದ ಅವಿಷ್ಕಾ ಫರ್ನಾಂಡೊ ರನ್‌ಗಾಗಿ ಓಡುತ್ತಿರುವುದು: ರಾಯಿಟರ್ಸ್ ಚಿತ್ರ
ಶ್ರೀಲಂಕಾದ ಅವಿಷ್ಕಾ ಫರ್ನಾಂಡೊ ರನ್‌ಗಾಗಿ ಓಡುತ್ತಿರುವುದು: ರಾಯಿಟರ್ಸ್ ಚಿತ್ರ   

ಕೊಲಂಬೋ: ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೀಲಂಕಾ ತಂಡದಲ್ಲಿ ಉದಾನಾ ಬದಲಿಗೆ ಕಸುನ್ ರಜಿತಾ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿಮೊದಲ ಪಂದ್ಯವನ್ನು ಗೆದ್ದಿರುವ ಶಿಖರ್ ಧವನ್ ನೇತೃತ್ವದ ಭಾರತ ತಂಡ ಸರಣಿಯಲ್ಲಿ 1–0 ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನು ಗೆದ್ದರೆ ಸರಣಿ ಭಾರತದ ಕೈವಶವಾಗಲಿದೆ.

ADVERTISEMENT

ಶ್ರೀಲಂಕಾ ತಂಡ: ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ, ಭನುಕಾ ರಾಜಪಕ್ಸ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶಾನಕಾ, ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಕಸುನ್ ರಾಜಿತಾ, ದುಷ್ಮಂತ ಚಮೀರ, ಇಶಾನ್ ಜಯರತ್ನೆ

ಭಾರತ ತಂಡ: ಪೃಥ್ವಿ ಶಾ, ಶಿಖರ್ ಧವನ್, ಇಶಾನ್ ಕಿಶನ್, ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ಕ್ರುನಾಲ್ ಪಾಂಡ್ಯಾ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.