ADVERTISEMENT

ಸ್ಟಾರ್ಕ್ ‘ವೇಗದ 150’ರ ಸ್ಪಾರ್ಕ್

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 19:45 IST
Last Updated 7 ಜೂನ್ 2019, 19:45 IST
ಮಿಷೆಲ್ ಸ್ಟಾರ್ಕ್‌ –ಎಎಫ್‌ಪಿ ಚಿತ್ರ
ಮಿಷೆಲ್ ಸ್ಟಾರ್ಕ್‌ –ಎಎಫ್‌ಪಿ ಚಿತ್ರ   

ನಾಟಿಂಗಂ (ಪಿಟಿಐ): ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 150 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದ ದಾಖಲೆ ಆಸ್ಟ್ರೇಲಿಯಾದ ಮಿಷೆಲ್ ಸ್ಟಾರ್ಕ್ ಪಾಲಾಯಿತು. ವಿಶ್ವಕಪ್‌ ಟೂರ್ನಿಯಲ್ಲಿ ಗುರುವಾರ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಐದು ವಿಕೆಟ್ ಗೊಂಚಲು ತಮ್ಮದಾಗಿಸಿಕೊಳ್ಳುವುದರೊಂದಿಗೆ ಅವರು ಈ ಸಾಧನೆ ಮಾಡಿದರು.

ಟ್ರೆಂಟ್ ಬ್ರಿಜ್‌ನಲ್ಲಿ ನಡೆದ ಪಂದ್ಯದಲ್ಲಿ 289 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಒಂಬತ್ತು ವಿಕೆಟ್‌ಗಳಿಗೆ 273 ರನ್ ಗಳಿಸಿ ಸೋಲೊಪ್ಪಕೊಂಡಿತ್ತು. 44 ರನ್‌ಗಳಿಗೆ ಐದು ವಿಕೆಟ್ ಕಬಳಿಸಿದ ಸ್ಟಾರ್ಕ್ ಆಸ್ಟ್ರೇಲಿಯಾದ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು. ಇದು, ಸ್ಟಾರ್ಕ್ ಅವರ ಆರನೇ ಐದು ವಿಕೆಟ್ ಗೊಂಚಲು ಸಾಧನೆಯಾಗಿತ್ತು.

ಪಾಕಿಸ್ತಾನದ ಸಕ್ಲೇನ್ ಮುಷ್ತಾಕ್ 77 ಪಂದ್ಯಗಳಲ್ಲಿ 150 ವಿಕೆಟ್ ಗಳಿಸಿದ್ದು ಈ ವರೆಗಿನ ದಾಖಲೆಯಾಗಿತ್ತು. ಸ್ಟಾರ್ಕ್‌ 76 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರು. ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ 81 ಪಂದ್ಯಗಳಲ್ಲಿ 150 ವಿಕೆಟ್ ಉರುಳಿಸಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬ್ರೆಟ್ ಲೀ (82 ಪಂದ್ಯ) ಮತ್ತು ಶ್ರೀಲಂಕಾದ ಅಜಂತಾ ಮೆಂಡಿಸ್ (84 ಪಂದ್ಯ) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.