ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಖವಾಜ
ಚಿತ್ರ ಕೃಪೆ: @19_11_nightmare
ಮೆಲ್ಬರ್ನ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬೆನ್ನು ನೋವಿನಿಂದ ಚೇತರಿಸಿಕೊಳ್ಳದಿದ್ದರೆ. ಒಂದುವೇಳೆ ಅವರು ಆ್ಯಷಸ್ ಸರಣಿ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದಿದ್ದರೆ ಆಸ್ಟ್ರೇಲಿಯಾ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿ ಸ್ಪಷ್ಟಪಡಿಸಿದ್ದಾರೆ.
ಬೆನ್ನು ನೋವಿನ ಗಾಯದಿಂದ ಬಳಲುತ್ತಿರುವ ಕಮ್ಮಿನ್ಸ್ ಭಾನುವಾರ ಪರ್ತ್‌ನಲ್ಲಿ ಆರಂಭವಾಗಲಿರುವ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲು ತಂಡವನ್ನು ಮಿಚೆಲ್ ಮಾರ್ಷ್ ಮುನ್ನಡೆಸುತ್ತಿದ್ದಾರೆ.
ನವೆಂಬರ್ 21 ರಿಂದ ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಮೊದಲ ಆ್ಯಷಸ್ ಟೆಸ್ಟ್ ವೇಳೆಗೆ ಕಮ್ಮಿನ್ಸ್ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಮಾಜಿ ನಾಯಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.
‘ಪ್ಯಾಟ್ ಕಮಿನ್ಸ್ ಗುಣಮುಖರಾಗದೆ ಆ್ಯಷಸ್ ಸರಣಿಯಿಂದ ಹೊರಗುಳಿದರೆ ಸ್ಟೀವ್ ಸ್ಮಿತ್ ನಾಯಕರಾಗುತ್ತಾರೆ. ಅದೇನು ನಮಗೆ ದೊಡ್ಡ ವಿಚಾರವಲ್ಲ, ಈ ಸೂತ್ರ ಕೆಲಸ ಮಾಡಿದೆ’ ಎಂದು ಬೈಲಿ ಹೇಳಿರುವುದಾಗಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.