
ಪಿಟಿಐ
ಲಂಡನ್ : ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರು ಎಡಗಾಲಿನ ಮಂಡಿಯ ಶಸ್ತ್ರಚಿಕಿತ್ಸೆಗೊಳಗಾದರು.
32 ವರ್ಷದ ಬೆನ್ ಅವರಿಗೆ ಮಂಡಿನೋವಿನಿಂದಾಗಿ ಕಳೆದ ಆ್ಯಷಸ್ ಸರಣಿಯಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ.
ಈ ವರ್ಷದಲ್ಲಿ ಅವರು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. ಉಳಿದಂತೆ ಬೇರೆ ಸರಣಿಗಳಲ್ಲಿ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ.
ತಮ್ಮ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಪುನಶ್ಚೇತನ ಆರಂಭವಾಗಿದೆ ಎಂಬ ಸಂದೇಶವನ್ನು ಚಿತ್ರ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
2024ರ ಜನವರಿ 25ರಿಂದ ಹೈದರಾಬಾದಿನಲ್ಲಿ ಆರಂಭಗೊಳ್ಳುವ ಭಾರತದ ಎದುರಿನ ಟೆಸ್ಟ್ ಸರಣಿಯಲ್ಲಿ ಅವರು ಆಡುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.