ADVERTISEMENT

ಕ್ರಿಕೆಟ್‌ ಸಂಸ್ಥೆಗಳು ಸುಧಾರಣಾ ಕ್ರಮಗಳಿಗೆ ಮುಂದಾಗಲಿ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 15:38 IST
Last Updated 13 ಫೆಬ್ರುವರಿ 2026, 15:38 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ‘ಜಿಲ್ಲಾ ಸಂಸ್ಥೆಗಳು ವೃತ್ತಿಪರವಾಗಿ, ಪಾರದರ್ಶಕವಾಗಿ ಮತ್ತು ಕ್ರೀಡೆಯ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಸುಧಾರಣಾ ಕ್ರಮಗಳನ್ನು ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

‘ಆಟಗಾರರ ಆಯ್ಕೆಯೂ ಪಾರದರ್ಶಕವಾಗಿರುವಂತೆ ನೋಡಿಕೊಳ್ಳುವುದು ಇಂಥ ಸುಧಾರಣೆಗಳಲ್ಲಿ ಸೇರಿರಬೇಕು ಎಂದು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

‘ಒಳ್ಳೆಯ ಆಡಳಿತ, ನಿರ್ವಹಣೆ, ಪಾರದರ್ಶಕತೆ ಮತ್ತು ಹಿತಾಸಕ್ತಿ ಸಂಘರ್ಷ ತಪ್ಪಿಸುವಂಥ ಸುಧಾರಣಾ ಕ್ರಮಗಳ ಅನುಷ್ಠಾನದಲ್ಲಿ ಜಿಲ್ಲಾ ಸಂಸ್ಥೆಗಳೂ ಸ್ವಯಂ ಪ್ರೇರಣೆಯಿಂದ ಕಾರ್ಯಪ್ರವೃತ್ತವಾಗಬೇಕು’ ಎಂದೂ ಪೀಠ ಸಲಹೆ ನೀಡಿದೆ.

ADVERTISEMENT

‘ಮತದಾನ ಮತ್ತು ಸದಸ್ಯತ್ವ ಹಕ್ಕುಗಳಿಗೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ತಿರುಚಿರಾಪಳ್ಳಿ ಜಿಲ್ಲಾ ಕ್ರಿಕೆಟ್‌ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.