ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ ಸೂರ್ಯಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮಾರ್ಚ್ 2021, 15:02 IST
Last Updated 18 ಮಾರ್ಚ್ 2021, 15:02 IST
ಸಿಕ್ಸರ್‌ ಬಾರಿಸುತ್ತಿರುವ ಸೂರ್ಯಕುಮಾರ್‌ ಯಾದವ್ ‌ (ಟ್ವಿಟರ್‌ ಚಿತ್ರ: @BCCI)
ಸಿಕ್ಸರ್‌ ಬಾರಿಸುತ್ತಿರುವ ಸೂರ್ಯಕುಮಾರ್‌ ಯಾದವ್ ‌ (ಟ್ವಿಟರ್‌ ಚಿತ್ರ: @BCCI)    

ಅಹಮದಾಬಾದ್‌ (ಗುಜರಾತ್‌): ಮೊದಲ ಬಾಲ್‌ಗೇ ಸಿಕ್ಸರ್‌ ಬಾರಿಸುವ ಮೂಲಕ ಸೂರ್ಯಕುಮಾರ್‌ ಯಾದವ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಬದುಕು ಆರಂಭಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಗುರುವಾರ ಆರಂಭವಾದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಲು ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು.

ಸೂರ್ಯಕುಮಾರ್ ಅವರು ಜೋಫ್ರಾ ಆರ್ಚರ್ ಅವರ 143.9 ಕಿ.ಮೀ ವೇಗದ ಎಸೆತವನ್ನು ಬೌಂಡರಿಗೆ ಕಳುಹಿಸಿದರು. ಇದಿಷ್ಟೇ ಅಲ್ಲ ಇದೇ ಪಂದ್ಯದಲ್ಲಿ ಅವರು ಅರ್ಧಶತಕ ಸಿಡಿಸಿದರು.

ADVERTISEMENT

ತಮ್ಮ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಈ ಸಾಧನೆ ಮಾಡಿದ್ದಾರೆ. ತಾವು ಆಡಿದ ಮೊದಲ ಟಿ20 ಯಲ್ಲಿ ಬ್ಯಾಟಿಂಗ್ ಮಾಡುವ ಅವಕಾಶದಿಂದ ಅವರು ವಂಚಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.