ADVERTISEMENT

ಟಿ20 ತಂಡಕ್ಕೆ ಸೂರ್ಯಕುಮಾರ್‌ ಯಾದವ್‌ ನಾಯಕ?

ಪಿಟಿಐ
Published 18 ಜುಲೈ 2024, 4:20 IST
Last Updated 18 ಜುಲೈ 2024, 4:20 IST
<div class="paragraphs"><p>ಸೂರ್ಯಕುಮಾರ್‌ ಯಾದವ್‌ </p></div>

ಸೂರ್ಯಕುಮಾರ್‌ ಯಾದವ್‌

   

(ಪಿಟಿಐ ಚಿತ್ರ)

ನವದೆಹಲಿ: ಸ್ಫೋಟಕ ಶೈಲಿಯ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಭಾರತ ಟಿ20 ತಂಡದ ನಾಯಕರಾಗಿ ಹೊರಹೊಮ್ಮಿದ್ದಾರೆ.

ADVERTISEMENT

ನೂತನ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರಕರ್ ಅವರು ಸೂರ್ಯಕುಮಾರ್ ಅವರಿಗೆ ಅವಕಾಶ ನೀಡಲು ಚಿತ್ತ ಹರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಅವರು ಉಪನಾಯಕನಾಗಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ.

ಮಂಗಳವಾರದ ವರದಿಗಳ ಪ್ರಕಾರ; ಮುಂಬರುವ ಶ್ರೀಲಂಕಾ ಪ್ರವಾಸದ ಟಿ20 ಸರಣಿಯಲ್ಲಿ ಹಾರ್ದಿಕ್ ನಾಯಕತ್ವ ವಹಿಸಲಿದ್ದಾರೆ ಎಂದಿತ್ತು. ಆದರೆ ಸೂರ್ಯಕುಮಾರ್ ಯಾದವ್ ಅವರು ಈ ಪ್ರವಾಸಕ್ಕೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರಿಗೆ ನಾಯಕತ್ವದ ಹೊಣೆ ನೀಡುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಟಿ20 ವಿಶ್ವಕಪ್ ಗೆಲುವಿನ ನಂತರ ರೋಹಿತ್ ಶರ್ಮಾ ಅವರು ಚುಟುಕು ಮಾದರಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸೂರ್ಯಕುಮಾರ್ ಅವರು ಹೋದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಎದುರಿನ ಸರಣಿಗಳ ಎಂಟು ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.