ADVERTISEMENT

ICC T20 WC: ಸೂರ್ಯ ಮಿಂಚು; ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಅಕ್ಟೋಬರ್ 2022, 12:38 IST
Last Updated 10 ಅಕ್ಟೋಬರ್ 2022, 12:38 IST
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್   

ಪರ್ತ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪರ್ತ್‌ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ಸೋಮವಾರ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು 13 ರನ್ ಅಂತರದ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡವು ಸೂರ್ಯಕುಮಾರ್ ಯಾದವ್ ಬಿರುಸಿನ ಅರ್ಧಶತಕದ (52) ಬಲದೊಂದಿಗೆ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು.

ಬಳಿಕ ಗುರಿ ಬೆನ್ನಟ್ಟಿದ ವೆಸ್ಟರ್ನ್ ಆಸ್ಟ್ರೇಲಿಯಾ ಇಲೆವೆನ್, ಸ್ಯಾಮ್ ಫನ್ನಿಂಗ್ ಅರ್ಧಶತಕದ (59) ಹೊರತಾಗಿಯೂ ಎಂಟು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಸಾಧ್ಯವಾಯಿತು.

35 ಎಸೆತಗಳನ್ನು ಎದುರಿಸಿದ ಸೂರ್ಯ, ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು.

ನಾಯಕ ರೋಹಿಶ್ ಶರ್ಮಾ (3) ಹಾಗೂ ರಿಷಭ್ ಪಂತ್ (9) ವೈಫಲ್ಯ ಅನುಭವಿಸಿದರು. ಹಾರ್ದಿಕ್ ಪಾಂಡ್ಯ 27, ದೀಪಕ್ ಹೂಡಾ 22 ಮತ್ತು ದಿನೇಶ್ ಕಾರ್ತಿಕ್ ಅಜೇಯ 19 ರನ್ ಗಳಿಸಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಅರ್ಶದೀಪ್ ಸಿಂಗ್ ಮೂರು ಮತ್ತು ಭುವನೇಶ್ವರ್ ಕುಮಾರ್ ಹಾಗೂ ಯಜುವೇಂದ್ರ ಚಾಹಲ್ ತಲಾ ಎರಡು ವಿಕೆಟ್ ಕಬಳಿಸಿದರು.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಅಕ್ಟೋಬರ್ 16ರಂದು ಆರಂಭವಾಗಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದಸವಾಲನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.