ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್‌ಫೈನಲ್ ಪಂದ್ಯಗಳು ಬುಧವಾರ ಬೆಂಗಳೂರಿನಲ್ಲಿ ನಡೆಯಲಿವೆ.
ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಎರಡು ಮತ್ತು ಇನ್ನುಳಿದ ಎರಡು ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.
ಭಾರತ ತಂಡದ ಆಟಗಾರರಾದ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಅಜಿಂಕ್ಯ ರಹಾನೆ, ಶಿವಂ ದುಬೆ, ಶಾರ್ದೂಲ್ ಠಾಕೂರ್ ಅವರು ಇರುವ ಮುಂಬೈ ತಂಡವು ಆಲೂರಿನ ಕ್ರೀಡಾಂಗಣದಲ್ಲಿ ವಿದರ್ಭ ತಂಡವನ್ನು ಎದುರಿಸಲಿದೆ.
ವಿದರ್ಭ ತಂಡದಲ್ಲಿ ಕರ್ನಾಟಕದ ಕರುಣ್ ನಾಯರ್ ಅವರು ಆಡು್ತಿದ್ಆರೆ. ವೇಗಿ ಉಮೇಶ್ ಯಾದವ್, ಜಿತೇಶ್ ಶರ್ಮಾ, ಶುಭಂ ದುಬೆ ಅವರು ತಂಡದಲ್ಲಿರುವ ಪ್ರಮುಖರಾಗಿದ್ದಾರೆ.
ಇದೇ ಕ್ರೀಡಾಂಗಣದಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ ಮಧ್ಯಪ್ರದೇಶ ಹಾಗೂ ಸೌರಾಷ್ಟ್ರ ಮುಖಾಮುಖಿಯಾಗಲಿವೆ.
ಕಳೆದ ಬಾರಿಯ ರನ್ನರ್ಸ್ ಅಪ್ ಬರೋಡಾ ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಂಗಾಳ ಎದುರು ಆಡಲಿದೆ. ಇನ್ನೊಂದು ಪಂದ್ಯದಲ್ಲಿ ಡೆಲ್ಲಿಮತ್ತು ಉತ್ತರಪ್ರದೇಶ ತಂಡಗಳು ಸೆಣಸಲಿವೆ.
ಕ್ವಾರ್ಟರ್‌ಫೈನಲ್ ಪಂದ್ಯಗಳು ಇಂದು
ಮಧ್ಯಪ್ರದೇಶ–ಸೌರಾಷ್ಟ್ರ (ಬೆಳಿಗ್ಗೆ 9ರಿಂದ)
ಮುಂಬೈ–ವಿದರ್ಭ (ಮಧ್ಯಾಹ್ನ 1.30ರಿಂದ)
ಸ್ಥಳ: ಕೆಎಸ್‌ಸಿಎ ಕ್ರೀಡಾಂಗಣ, ಅಲೂರು
ಬರೋಡಾ–ಬಂಗಾಳ (ಬೆಳಿಗ್ಗೆ 11)
ಡೆಲ್ಲಿ–ಉತ್ತರಪ್ರದೇಶ (ಮಧ್ಯಾಹ್ನ 1.30)
ಸ್ಥಳ: ಚಿನ್ನಸ್ವಾಮಿ ಕ್ರೀಡಾಂಗಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.