
ಪಿಟಿಐ
ಕೊಲಂಬೊ: ವೇಗದ ಬೌಲರ್ ಮ್ಯಾಟ್ ಹೆನ್ರಿ ಅವರು ಇಂಗ್ಲೆಂಡ್ ವಿರುದ್ಧ ಪಂದ್ಯದ ನಂತರ ಶುಕ್ರವಾರ ತಡರಾತ್ರಿ ನ್ಯೂಜಿಲೆಂಡ್‌ಗೆ ಮರಳಿದರು. ಮ್ಯಾಟ್ ಹೆನ್ರಿ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಈ ವೇಳೆ ಪತ್ನಿ ಹೋಲಿ ಜೊತೆಯಲ್ಲಿರಲು ಅವರಿಗೆ ನ್ಯೂಜಿಲೆಂಡ್ ಕ್ರಿಕೆಟ್ ಪಿತೃತ್ವ ರಜೆ ಮಂಜೂರು ಮಾಡಿದೆ.
ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆದಲ್ಲಿ ಅವರು ಭಾರತಕ್ಕೆ ಹಿಂತಿರುಗಿ ಟೂರ್ನಿಯಲ್ಲಿ ಆಡಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.