
ಕೊಲಂಬೊ: ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ವಿರುದ್ಧ ಟಾಸ್ ಗೆದ್ದಿರುವ ಶ್ರೀಲಂಕಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ಜರುಗುತ್ತಿದ್ದು, ಎರಡೂ ತಂಡಗಳು ಕೂಡ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
ಆತಿಥೇಯ ಶ್ರೀಲಂಕಾ ತಂಡವು ತನ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 51 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತ್ತು.
ನ್ಯೂಜಿಲೆಂಡ್ ತಂಡವು ಸೂಪರ್ 8ನ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಬೇಕಿತ್ತು. ಆದರೆ, ಆ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.
ಶ್ರೀಲಂಕಾ ತಂಡವು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ತಂಡವು 1 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.
ಈ ಪಂದ್ಯವು ಆತಿಥೇಯ ಶ್ರೀಲಂಕಾ ಪಾಲಿಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು, ಒಂದು ವೇಳೆ ಈ ಪಂದ್ಯವನ್ನು ಸೋತರೆ ಟೂರ್ನಿಯಿಂದ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.