
ಬ್ರಿಸ್ಬೇನ್: ಭಾರತ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾವಿರ ರನ್ ಗಡಿದಾಟಿದ್ದಾರೆ. ಕೇವಲ 28 ಇನಿಂಗ್ಸ್‌ನಲ್ಲಿ ಈ ದಾಖಲೆ ಬರೆದಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐದನೇ ಟಿ–20 ಪಂದ್ಯದಲ್ಲಿ 14 ರನ್ ಗಳಿಸಿದ ವೇಳೆ ಈ ಸಾಧನೆ ಮಾಡಿದ್ದಾರೆ.
ಅಭಿಷೇಕ್ ಶರ್ಮಾ ಅವರು ಭಾರತದ ಪರ ಟಿ–20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಇನಿಂಗ್ಸ್‌ನಲ್ಲಿ ಸಾವಿರ ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ. ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು 27 ಇನಿಂಗ್ಸ್‌ನಲ್ಲಿ ಸಾವಿರ ರನ್ ಬಾರಿಸಿದ್ದರು.
ಕೇವಲ 528 ಎಸೆತಗಳಲ್ಲಿ 1000 ರನ್ ಗಳಿಸುವ ಮೂಲಕ, ಟಿ–20 ಕ್ರಿಕೆಟ್‌ನ ಇತಿಹಾಸದಲ್ಲೇ ಅತಿ ಕಡಿಮೆ ಎಸೆತಗಳಲ್ಲಿ ಸಾವಿರ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಅಭಿಷೇಕ್ ಶರ್ಮಾ ಅವರು ಪಾತ್ರರಾಗಿದ್ದಾರೆ. ಈ ಮೂಲಕ 573 ಎಸೆತಗಳಲ್ಲಿ ಸಾವಿರ ರನ್ ಸಿಡಿಸಿದ್ದ, ಸೂರ್ಯಕುಮಾರ್ ಯಾದವ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.