ಮಹೇಂದ್ರ ಸಿಂಗ್ ಧೋನಿ
(ಪಿಟಿಐ ಚಿತ್ರ)
ಚೆನ್ನೈ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, 400 ಟ್ವೆಂಟಿ-20 ಪಂದ್ಯಗಳನ್ನು ಆಡಿದ ಗೌರವಕ್ಕೆ ಭಾಜನರಾಗಿದ್ದಾರೆ.
2025ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇಂದು (ಶುಕ್ರವಾರ) ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಧೋನಿ ಈ ವೈಯಕ್ತಿಕ ಮೈಲಿಗಲ್ಲು ತಲುಪಿದ್ದಾರೆ.
ಆ ಮೂಲಕ 400ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಭಾರತೀಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರಿದ್ದಾರೆ.
ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ:
ರೋಹಿತ್ ಶರ್ಮಾ: 456
ದಿನೇಶ್ ಕಾರ್ತಿಕ್: 412
ವಿರಾಟ್ ಕೊಹ್ಲಿ: 408
ಮಹೇಂದ್ರ ಸಿಂಗ್ ಧೋನಿ: 400
ಏತನ್ಮಧ್ಯೆ ಅಂತರರಾಷ್ಟ್ರೀಯ ಆಟಗಾರರ ಪೈಕಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ದಾಖಲೆ ವೆಸ್ಟ್‌ಇಂಡೀಸ್‌ನ ಮಾಜಿ ಆಟಗಾರ ಕೀರಾನ್ ಪೊಲಾರ್ಡ್ ಅವರಿಗೆ ಸಲ್ಲುತ್ತದೆ. ಪೊಲಾರ್ಡ್ 695 ಟಿ20 ಪಂದ್ಯಗಳನ್ನು ಆಡಿದ್ದಾರೆ. ಎರಡನೇ ಸ್ಥಾನದಲ್ಲೂ ವಿಂಡೀಸ್‌ನವರೇ ಆದ ಡ್ವೇನ್ ಬ್ರಾವೊ (582) ಇದ್ದಾರೆ.
ಈ ನಡುವೆ ತಮ್ಮ 400ನೇ ಟಿ20 ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಕೇವಲ 6 ರನ್ ಗಳಿಸಿ ಔಟ್ ಆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.