ADVERTISEMENT

T20 WC: ಅಫ್ಗನ್ ಗೆಲುವಿಗೆ ಭಾರತೀಯರ ಪ್ರಾರ್ಥನೆ; ವೈರಲ್ ಮೀಮ್ಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ನವೆಂಬರ್ 2021, 16:40 IST
Last Updated 6 ನವೆಂಬರ್ 2021, 16:40 IST
ಟ್ವಿಟರ್ ಚಿತ್ರ
ಟ್ವಿಟರ್ ಚಿತ್ರ   

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಅಫ್ಗಾನಿಸ್ತಾನ ಗೆದ್ದರಷ್ಟೇ ಭಾರತಕ್ಕೆ ಉಳಿಗಾಲ.

ಇದರೊಂದಿಗೆ ಕೋಟ್ಯಂತರ ಭಾರತೀಯ ಅಭಿಮಾನಿಗಳು ಅಫ್ಗಾನಿಸ್ತಾನದ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿಮೀಮ್ಸ್ ವೈರಲ್ ಆಗಿದೆ.

ನ್ಯೂಜಿಲೆಂಡ್ ವಿರುದ್ಧ ಅಫ್ಗಾನಿಸ್ತಾನ ಜಯ ದಾಖಲಿಸಿದ್ದಲ್ಲಿ ಭಾರತದ ಸೆಮಿಫೈನಲ್ ಕನಸು ಚಿಗುರೊಡೆಯಲಿದೆ.

ಒಟ್ಟಿನಲ್ಲಿ ಭಾರತದ ವಿಶ್ವಕಪ್ ಕನಸು ಅಫ್ಗಾನಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯವನ್ನು ಅವಲಂಬಿಸಿದೆ.

ಹಾಗೊಂದು ವೇಳೆ ನ್ಯೂಜಿಲೆಂಡ್ ಗೆದ್ದರೆ, ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.