ADVERTISEMENT

ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಕಗಿಸೊ ರಬಾಡ 'ಹ್ಯಾಟ್ರಿಕ್' ಸಾಧನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2021, 12:40 IST
Last Updated 7 ನವೆಂಬರ್ 2021, 12:40 IST
ಕಗಿಸೊ ರಬಾಡ
ಕಗಿಸೊ ರಬಾಡ   

ದುಬೈ: ದಕ್ಷಿಣ ಆಫ್ರಿಕಾದ ಬಲಗೈ ವೇಗದ ಬೌಲರ್ ಕಗಿಸೊ ರಬಾಡ, ಏಕದಿನ ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 'ಹ್ಯಾಟ್ರಿಕ್' ವಿಕೆಟ್ ಸಾಧನೆ ಮಾಡಿದ ಹಿರಿಮೆಗೆ ಭಾಜನರಾಗಿದ್ದಾರೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ರಬಾಡ ಈ ವಿಶಿಷ್ಟ ದಾಖಲೆ ಬರೆದರು.

ಈ ಹಿಂದೆ 2015ರಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಏಕದಿನ ಪಂದ್ಯದಲ್ಲೂ ರಬಾಡ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದರು.

ಅಲ್ಲದೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ಮೊದಲ ಬೌಲರ್ ಎನಿಸಿದ್ದಾರೆ.

ಒಟ್ಟಾರೆಯಾಗಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ ನಾಲ್ಕನೇ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ಪೈಕಿ ಮೂರು ಹ್ಯಾಟ್ರಿಕ್ ಸಾಧನೆಗಳು ಪ್ರಸಕ್ತ ಸಾಲಿನ ವಿಶ್ವಕಪ್‌ನಲ್ಲೇ ದಾಖಲಾಗಿವೆ.

ಇದೇ ವಿಶ್ವಕಪ್‌ನಲ್ಲಿ ಐರ್ಲೆಂಡ್‌ನ ಕರ್ಟಿಸ್ ಕ್ಯಾಂಫರ್ ಹಾಗೂ ಶ್ರೀಲಂಕಾದ ವನಿಂದು ಹಸರಂಗ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇನ್ನು 2007ರ ಟಿ20 ವಿಶ್ವಕಪ್‌ನಲ್ಲಿ ಬ್ರೆಟ್ ಲೀ ಹ್ಯಾಟ್ರಿಕ್ ಸಾಧನೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.