ಶಾರ್ಜಾ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಶಾರ್ಜಾದಲ್ಲಿ ನಡೆಯುತ್ತಿರುವ ಸೂಪರ್-12 ಹಂತದ ಗ್ರೂಪ್ 1ರ ಪಂದ್ಯದ ವೇಳೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಆಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಶ್ರೀಲಂಕಾದ ವೇಗದ ಬೌಲರ್ ಲಾಹಿರು ಕುಮಾರ ಹಾಗೂ ಬಾಂಗ್ಲಾದೇಶದ ಆರಂಭಿಕ ಬ್ಯಾಟರ್ ಲಿಟನ್ ದಾಸ್ ನಡುವೆ ನೇರ ವಾಗ್ವಾದ ನಡೆಯಿತು.
T20 WC LIVE | IND vs PAK: ಸೂಪರ್ ಸಂಡೇ; ಭಾರತಕ್ಕೆ ಪಾಕ್ ಸವಾಲು
ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ಲಾಹಿರು ಕುಮಾರ ದಾಳಿಯಲ್ಲಿ ದೊಡ್ಡ ಹೊಡೆತಕ್ಕೆ ಮುಂದಾದ ಲಿಟನ್ ದಾಸ್, ಲಂಕಾ ನಾಯಕ ದಸುನ್ ಶನಕ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಈ ವೇಳೆ ಲಿಟನ್ ಬಳಿ ತೆರಳಿದ ಲಾಹಿರು, ಪದ ಪ್ರಯೋಗ ಮಾಡಿದರು. ಇದರಿಂದ ಸಿಟ್ಟಿಗೆದ್ದ ದಾಸ್ ಪ್ರತ್ಯುತ್ತರ ನೀಡಿದರು. ಇದರಿಂದಾಗಿ ಬಿಗುವಾದ ವಾತಾವರಣ ನಿರ್ಮಾಣವಾಯಿತು.
ಬಳಿಕ ಸಹ ಆಟಗಾರರು ಮಧ್ಯೆ ಪ್ರವೇಶಿಸಿ ವಾತಾವರಣವನ್ನು ಶಾಂತಗೊಳಿಸಿದರು. ಅವರಿಬ್ಬರ ನಡುವೆ ಯಾವ ಕಾರಣಕ್ಕೆ ವಾಗ್ವಾದ ನಡೆದಿದೆ ಎಂಬುದು ತಿಳಿದು ಬಂದಿಲ್ಲ.
ಬಾಂಗ್ಲಾದೇಶ ಹಾಗೂ ಶ್ರೀಲಂಕಾ ತಂಡಗಳು ಅರ್ಹತಾ ಸುತ್ತಿನಲ್ಲಿ ತೇರ್ಗಡೆಯನ್ನು ಹೊಂದಿ ಸೂಪರ್-12 ಹಂತಕ್ಕೆ ಲಗ್ಗೆಯಿಟ್ಟಿತ್ತು. ಲಂಕಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿರುವ ಬಾಂಗ್ಲಾದೇಶ ಮೊಹಮ್ಮದ್ ನಯೀಮ್ (62) ಹಾಗೂ ಮುಷ್ಫಿಕುರ್ ರಹೀಮ್ (57*) ಅರ್ಧಶತಕಗಳ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.