ADVERTISEMENT

T20 WC: ಟೀಮ್ ಇಂಡಿಯಾದ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಂತಿದೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2021, 11:32 IST
Last Updated 13 ಅಕ್ಟೋಬರ್ 2021, 11:32 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ದುಬೈ: ಐಪಿಎಲ್ ಬೆನ್ನಲ್ಲೇ ಯುಎಇ ಹಾಗೂ ಒಮಾನ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ ಆಯೋಜನೆಯಾಗಲಿದೆ. ಭಾರತ ತಂಡವು ತನ್ನ ಮೊದಲ ಮುಖಾಮುಖಿಯಲ್ಲಿ ಅಕ್ಟೋಬರ್ 24ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ.

ಇದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳಲ್ಲಿಟೀಮ್ ಇಂಡಿಯಾ ಭಾಗವಹಿಸಲಿದೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿರುವ ವಿರಾಟ್ ಕೊಹ್ಲಿ ಬಳಗವು ಭರ್ಜರಿ ಪೂರ್ವ ತಯಾರಿಯನ್ನು ನಡೆಸಲಿದೆ.

ಭಾರತದ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಇಂತಿದೆ:
ಅ. 18: ಇಂಗ್ಲೆಂಡ್ ವಿರುದ್ಧ, ದುಬೈ
ಅ. 20: ಆಸ್ಟ್ರೇಲಿಯಾ ವಿರುದ್ಧ, ದುಬೈ

ಟೂರ್ನಿಯಲ್ಲಿ ಒಟ್ಟು 16 ಅಭ್ಯಾಸ ಪಂದ್ಯಗಳು ನಡೆಯಲಿವೆ. ಇವೆಲ್ಲವೂ ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿವೆ. ಅತ್ತ ಪಾಕಿಸ್ತಾನ ತಂಡವು ವೆಸ್ಟ್‌ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಸೆಣಸಲಿವೆ.

ಇದನ್ನೂ ಓದಿ:

ಬಿಸಿಸಿಐ ಆತಿಥ್ಯ ವಹಿಸುತ್ತಿರುವ ಟ್ವೆಂಟಿ-20 ವಿಶ್ವಕಪ್ ಯುಎಇ ಹಾಗೂ ಒಮಾನ್‌ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ನಡೆಯಲಿದೆ. ಭಾರತದಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.