ADVERTISEMENT

ICC T20 World Cup 2022: ಭಾರತ vs ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಸೆಪ್ಟೆಂಬರ್ 2022, 7:30 IST
Last Updated 15 ಸೆಪ್ಟೆಂಬರ್ 2022, 7:30 IST
ಬಾಬರ್ ಆಜಂ ಮತ್ತು ರೋಹಿತ್ ಶರ್ಮಾ
ಬಾಬರ್ ಆಜಂ ಮತ್ತು ರೋಹಿತ್ ಶರ್ಮಾ   

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯದ ಎಲ್ಲ ಟಿಕೆಟ್‌ಗಳು ಮಾರಾಟವಾಗಿವೆ.

ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 23ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ADVERTISEMENT

ಚುಟುಕು ವಿಶ್ವಕಪ್‌ಗಾಗಿ ಎಲ್ಲ ವಯಸ್ಸಿನ ಅಭಿಮಾನಿಗಳನ್ನು ಸ್ವಾಗತಿಸಲು ಸಿದ್ಧವಾಗಿದ್ದು, ಪ್ರತಿಷ್ಠಿತ ಟೂರ್ನಿ ಆರಂಭವಾಗುವ ಒಂದು ತಿಂಗಳ ಮುನ್ನವೇ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಒಟ್ಟು 82 ದೇಶಗಳ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.