
ಭಾರತದ ಶುಭಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ
ನವದೆಹಲಿ: ಟಿ20 ವಿಶ್ವಕಪ್ 2026 ಆರಂಭವಾಗಿದ್ದು, ಭಾರತ ತಂಡ ಎ ಗುಂಪಿನ ತನ್ನ ಮೊದಲ ಪಂದ್ಯವನ್ನು ಗೆದ್ದು ಶುಭಾರಂಭ ಮಾಡಿದೆ. ದೆಹಲಿಯಲ್ಲಿ ಗುರುವಾರ ನಡೆಯಲಿರುವ ಎರಡನೇ ಪಂದ್ಯಕ್ಕೆ ಭಾರತ ಸಜ್ಜಾಗುತ್ತಿದೆ. ಈ ನಡುವೆ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾರತ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹೊಟ್ಟೆ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ, ದೆಹಲಿಯಲ್ಲಿ ಗುರುವಾರ ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಅನುಮಾನ ಎನ್ನಲಾಗಿದೆ.
ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ
‘ಹೊಟ್ಟೆಯ ಸೋಂಕಿನಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಅವರು ಕಳೆದ ಎರಡು ದಿನಗಳಿಂದ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಸಮಸ್ಯೆ ತಿಳಿಯಲು ಕೆಲವು ಪರೀಕ್ಷೆಗಳನ್ನು ಕೂಡ ನಡೆಸಲಾಗುತ್ತಿದೆ. ಅವರು ಇಂದು ಡಿಸ್ಚಾರ್ಜ್ ಆಗುತ್ತಾರಾ, ಇಲ್ಲವಾ? ಎಂಬುದು ಸ್ಪಷ್ಟವಾಗಿಲ್ಲ. ಆದರೆ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ’ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.