ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಭಾರತದ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ದೀಪಕ್ ಹೂಡಾ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.