
ಪಿಟಿಐ
ಮುಂಬೈ: ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ಫೆ.7 ರಿಂದ ಚುಟುಕು ಕ್ರಿಕೆಟ್ ವಿಶ್ವಕಪ್ ಆರಂಭಗೊಳ್ಳಲಿದ್ದು, ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾವು ಅಮೆರಿಕ ವಿರುದ್ಧ ಸೆಣಸಲಿದೆ.
ಶುಕ್ರವಾರ ಸಂಜೆ ಜ್ವರದಿಂದ ಅಭ್ಯಾಸದ ವೇಳೆ ಗೈರಾಗಿದ್ದ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಶನಿವಾರ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ.
ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಸುಲಭ ಎದುರಾಳಿಯಾದ ಅಮೆರಿಕ ವಿರುದ್ಧ ಆಡಲಿದ್ದು, ತಂಡದ ಪ್ರಮುಖ ಬೌಲರ್ ಆಗಿರುವ ಬೂಮ್ರಾ ಅವರನ್ನು ಈ ಪಂದ್ಯದಲ್ಲಿ ಕಣಕ್ಕಿಳಿಸುವ ಸಾಧ್ಯತೆ ಕಡಿಮೆಯಿದೆ.
ಹರ್ಷಿತ್ ರಾಣಾ ಅವರ ಬದಲಿಗೆ ತಂಡದಲ್ಲಿ ಸ್ಥಾನಪಡೆದಿರುವ ಮೊಹಮ್ಮದ್ ಸಿರಾಜ್, ಬೂಮ್ರಾ ಜಾಗದಲ್ಲಿ ಮೊದಲ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.