
ಲಂಡನ್: ಮುಂಬರಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಇಂಗ್ಲೆಂಡ್‌ನ ಸಂಭವನೀಯ ತಂಡದಲ್ಲಿ ವೇಗಿ ಜೋಫ್ರಾ ಆರ್ಚರ್ ಸ್ಥಾನ ಪಡೆದಿದ್ದಾರೆ. ಅವರು ಪಕ್ಕೆಲುಬಿನ ಸೆಳೆತದ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಚೆಗೆ ಅವರು ಆ್ಯಷಸ್ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಗಾಯಗೊಂಡಿದ್ದರು.
ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ತವಕದಲ್ಲಿರುವ ವೇಗಿ ಜೋಶುವಾ ಟಂಗ್ ಅವರಿಗೂ ತಂಡದಲ್ಲಿ ಸ್ಥಾನ ಲಭಿಸಿದೆ. ಈ ಬಳಗವನ್ನು ಹ್ಯಾರಿ ಬ್ರೂಕ್ ಮುನ್ನಡೆಸಲಿದ್ದಾರೆ.
ಫೆಬ್ರುವರಿಯಲ್ಲಿ ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ.
ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್ ಸಂಭವನೀಯ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹಮದ್, ಜೋಫ್ರಾ ಆರ್ಚರ್, ಟಮ್ ಬೆಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೆಮಿ ಓವರ್ಟನ್, ಅದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.