ADVERTISEMENT

T20 WC | ಟೀಂ ಇಂಡಿಯಾವನ್ನು ಸಾಧಾರಣ ತಂಡವೆಂಬಂತೆ ಮಾಡಿದ ಇಂಗ್ಲೆಂಡ್: ಮಾರ್ಗನ್

ಐಎಎನ್ಎಸ್
Published 10 ನವೆಂಬರ್ 2022, 14:33 IST
Last Updated 10 ನವೆಂಬರ್ 2022, 14:33 IST
ಟಿ20 ಕ್ರಿಕೆಟ್‌ ವಿಶ್ವಕಪ್‌ನ ಸೆಮಿಫೈನಲ್‌ ಸೋಲಿನ ಬಳಿಕ ಪೆವಿಲಿಯನ್‌ನತ್ತ ಹೆಜ್ಜೆ ಇಟ್ಟ ಭಾರತ ತಂಡದ ಆಟಗಾರರು (ಚಿತ್ರಕೃಪೆ: ICC)
ಟಿ20 ಕ್ರಿಕೆಟ್‌ ವಿಶ್ವಕಪ್‌ನ ಸೆಮಿಫೈನಲ್‌ ಸೋಲಿನ ಬಳಿಕ ಪೆವಿಲಿಯನ್‌ನತ್ತ ಹೆಜ್ಜೆ ಇಟ್ಟ ಭಾರತ ತಂಡದ ಆಟಗಾರರು (ಚಿತ್ರಕೃಪೆ: ICC)   

ಅಡಿಲೇಡ್:ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ 10 ವಿಕೆಟ್‌ ಅಂತರದ ಅಮೋಘ ಜಯ ಸಾಧಿಸಿದ ಇಂಗ್ಲೆಂಡ್‌ ತಂಡವನ್ನು ಮಾಜಿ ಕ್ರಿಕೆಟಿಗ ಎಯಾನ್ ಮಾರ್ಗನ್‌ ಶ್ಲಾಘಿಸಿದ್ದಾರೆ.

ಇಂಗ್ಲೆಂಡ್‌ ಪರ 2019ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್‌ ಗೆದ್ದತಂಡದ ನಾಯಕರಾಗಿದ್ದ ಮಾರ್ಗನ್‌, ಜಾಸ್‌ ಬಟ್ಲರ್‌ ಬಳಗ ಆಡಿದ ರೀತಿಯು ಭಾರತ ತಂಡವನ್ನು ಸಾಧಾರಣ ತಂಡವೆಂಬಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂದು (ನವೆಂಬರ್‌ 10 ರಂದು) ಅಡಿಲೇಡ್‌ನ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 169 ರನ್ ಗಳಿಸಿತ್ತು.ಟೂರ್ನಿಯಲ್ಲಿ ನಾಲ್ಕನೇ ಅರ್ಧಶತಕ ಸಿಡಿಸಿದ ವಿರಾಟ್‌ ಕೊಹ್ಲಿ (50) ಮತ್ತು ಸ್ಫೋಟಕ ಬ್ಯಾಟಿಂಗ್ ಮಾಡಿದ ಹಾರ್ದಿಕ್‌ ಪಾಂಡ್ಯ (63) ಭಾರತ ತಂಡಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾಗಿದ್ದರು.

ADVERTISEMENT

ಈ ಮೊತ್ತ ಇಂಗ್ಲೆಂಡ್‌ಗೆ ಸವಾಲೇ ಆಗಲಿಲ್ಲ. ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಅಲೆಕ್ಸ್‌ ಹೇಲ್ಸ್‌ (89) ಮತ್ತು ಜಾಸ್‌ ಬಟ್ಲರ್‌ (80) ಜೋಡಿ ಮುರಿಯದ ಮೊದಲ ವಿಕೆಟ್‌ ಪಾಲುದಾರಿಕೆಯಲ್ಲಿ 170 ರನ್‌ ಕಲೆಹಾಕಿತು. ಹೀಗಾಗಿ 10 ವಿಕೆಟ್ ಅಂತರದ ಜಯ ಸಾಧಿಸಿದ ಇಂಗ್ಲೆಂಡ್‌, ‌ನವೆಂಬರ್‌ 13ರಂದು ಪಾಕಿಸ್ತಾನ ವಿರುದ್ಧ ಮೆಲ್ಬರ್ನ್‌ನಲ್ಲಿ ನಡೆಯುವ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಭಾರತ ತಂಡ ಈ ಬಾರಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿತ್ತು.

ಪಂದ್ಯದ ಕುರಿತು 'ಸ್ಕೈ ಸ್ಪೋರ್ಟ್ಸ್‌' ಜೊತೆಮಾತನಾಡಿರುವ ಮಾರ್ಗನ್‌, 'ಇಂಗ್ಲೆಂಡ್‌ ಪಡೆ, ಭಾರತ ತಂಡವು ಸಾಧಾರಣ ತಂಡದ ರೀತಿ ಕಾಣುವಂತೆ ಮಾಡಿತು.ಲಯದಲ್ಲಿರುವ ಜಾಸ್‌, ಕ್ರಿಕೆಟ್‌ ಜಗತ್ತಿನಲ್ಲಿ ಬೌಲಿಂಗ್‌ ಮಾಡಲು ಕಠಿಣ ಎನಿಸುವ ಬ್ಯಾಟರ್‌. ಅವರ ನಾಯಕತ್ವದ ಇಂಗ್ಲೆಂಡ್‌, ಅತ್ಯಂತ ಗುಣಮಟ್ಟದ ಆಟಪ್ರದರ್ಶಿಸಿದೆ' ಎಂದಿದ್ದಾರೆ.

ಇದೇ ವರ್ಷ (2022) ಜುಲೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಾರ್ಗನ್‌,ಇಂದು ತಾವೆಷ್ಟು ಚೆನ್ನಾಗಿ ಆಡಿದ್ದೇವೆ ಎಂಬುದನ್ನುಆಟಗಾರರು ಅವಲೋಕಿಸಬೇಕು ಮತ್ತುಮೆಲ್ಬರ್ನ್‌ನಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿಯೂ ಇದೇ ರೀತಿಯ ಪ್ರದರ್ಶನನೀಡಬೇಕು ಎಂದು ಸಲಹೆ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.