
ಚೆನ್ನೈ: ಟಿ–20 ವಿಶ್ವಕಪ್‌ನ 4ನೇ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಗಾನಿಸ್ತಾನ ತಂಡವು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು.
ಅಫ್ಗಾನಿಸ್ತಾನ ಪರ ಗುಲ್ಬದೀನ್ ನೈಬ್ ( 63 ರನ್; 35 ಎಸೆತ ) ಅರ್ಧ ಶತಕ ಸಿಡಿಸಿ ಮಿಂಚಿದರು. ಕಿವೀಸ್ ಪರ ಫರ್ಗುಸನ್ 2 ವಿಕೆಟ್ ಕಿತ್ತರೆ, ಢಪಿ, ಹೆನ್ರಿ ಹಾಗೂ ರಚಿನ್ ರವೀಂದ್ರ ತಲಾ 1 ವಿಕೆಟ್ ಪಡೆದು ಮಿಂಚಿದರು.
183 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ಆರಂಭದಲ್ಲೇ ಆಫ್ಗನ್ ಬೌಲರ್‌ಗಳು ಕಾಡಿದರು. ಫಿನ್ ಅಲೆನ್ 1 ರನ್‌ಗೆ ಔಟಾದರೆ, ರಚಿನ್ ರವೀಂದ್ರ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಆದರೆ, ಆರಂಭಿಕ ಬ್ಯಾಟರ್ ಟಿಮ್ ಸೀಫರ್ಟ್ (65 ರನ್; 42 ಎಸೆತ) ಹಾಗೂ ಗ್ಲೆನ್ ಫಿಲಿಪ್ಸ್ (42 ರನ್; 25 ಎಸೆತ) 3ನೇ ವಿಕೆಟ್‌ಗೆ 74 ರನ್ ಜೊತೆಯಾಟ ಆಡುವ ಮೂಲಕ ಆಸರೆಯಾದರು.
ನ್ಯೂಜಿಲೆಂಡ್ ತಂಡವು 17.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸುವ ಮೂಲಕ ಇನ್ನೂ 13 ಎಸೆತಗಳು ಬಾಕಿಯಿರುವಂತೆಯೇ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.