ADVERTISEMENT

ಟಿ20 ವಿಶ್ವಕಪ್ ಕ್ರಿಕೆಟ್: ಪಾಕ್‌ ವಿರುದ್ಧ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಅಕ್ಟೋಬರ್ 2022, 7:50 IST
Last Updated 23 ಅಕ್ಟೋಬರ್ 2022, 7:50 IST
ರೋಹಿತ್ ಶರ್ಮಾ ಮತ್ತು ಬಾಬರ್ ಆಜಂ
ರೋಹಿತ್ ಶರ್ಮಾ ಮತ್ತು ಬಾಬರ್ ಆಜಂ   

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಪಾಕಿಸ್ತಾನ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಮೆಲ್ಬರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಾಕ್‌ ವಿರುದ್ಧ ಟಾಸ್‌ ಗೆದ್ದಿರುವ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಗೆಲುವು ಸಾಧಿಸುವ ಹೊಸದೊಂದು ಅಧ್ಯಾಯ ಬರೆಯಲು ಉಭಯ ತಂಡಗಳು ಉತ್ಸುಕವಾಗಿವೆ. 2012ರ ಟಿ20 ವಿಶ್ವಕಪ್‌ ಟೂರ್ನಿಯಿಂದ ಈಚೆಗೆ ಪ್ರತಿ ಬಾರಿಯೂ ಲೀಗ್ ಹಂತದಲ್ಲಿ ಉಭಯ ತಂಡಗಳು ಹಣಾಹಣಿ ನಡೆಸಿವೆ.

ADVERTISEMENT

2013ರಿಂದ ಉಭಯ ತಂಡಗಳ ನಡುವೆ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಆದರೆ ತಟಸ್ಥ ತಾಣಗಳಲ್ಲಿ ಸಿಕ್ಕ ಅವಕಾಶಗಳಲ್ಲಿಯೇ ಎರಡೂ ದೇಶಗಳ ಆಟಗಾರರು ತಮ್ಮ ಸಂಪೂರ್ಣ ಸಾಮರ್ಥ್ಯದೊಂದಿಗೆ ಆಡಿದ್ದಾರೆ. ಹೊಸ ಸ್ನೇಹ ಬೆಳೆಸಿಕೊಂಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ವೈಫಲ್ಯ ಅನುಭವಿಸುತ್ತಿದ್ದ ವಿರಾಟ್ ಕೊಹ್ಲಿಗೆ ವಿಶ್ವಾಸ ತುಂಬುವಂತಹ ಟ್ವೀಟ್ ಸಂದೇಶವೊಂದನ್ನು ಪಾಕ್ ತಂಡದ ನಾಯಕ ಬಾಬರ್ ಆಜಂ ಹಾಕಿದ್ದರು. ಕಳೆದ ಅಗಸ್ಟ್‌ನಲ್ಲಿ ದುಬೈನಲ್ಲಿ ಗಾಯಗೊಂಡಿದ್ದ ಶಾಹೀನ್ ಶಾ ಆಫ್ರಿದಿ ಅವರ ಕುಶಲೋಪರಿ ವಿಚಾರಿಸಲು ವಿರಾಟ್ ತೆರಳಿದ್ದರು.

ತಂಡಗಳು: ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್) ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ಷದೀಪ್ ಸಿಂಗ್

ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ಶಾನ್ ಮಸೂದ್, ಹೈದರ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಇಫ್ತಿಕಾರ್ ಅಹಮದ್, ಅಸಿಫ್ ಅಲಿ, ಶಾಹೀನ್ ಆಫ್ರಿದಿ, ಹ್ಯಾರಿಸ್ ರವೂಫ್, ನಸೀಂ ಶಾಹ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.