ADVERTISEMENT

T20I batting rankings: ಅಗ್ರ ಸ್ಥಾನ ಕಾಯ್ದುಕೊಂಡ ಸೂರ್ಯ ಕುಮಾರ್ ಯಾದವ್

ಪಿಟಿಐ
Published 23 ನವೆಂಬರ್ 2022, 11:35 IST
Last Updated 23 ನವೆಂಬರ್ 2022, 11:35 IST
   

ದುಬೈ: ಅದ್ಬುತ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ–20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ–20 ಪಂದ್ಯದಲ್ಲಿ 51 ಎಸೆತಗಳಲ್ಲಿ 111 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಅವರು ಪ್ರಥಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸರಣಿಯಲ್ಲಿ 31 ಪಾಯಿಂಟ್ಸ್ ಸಂಪಾದಿಸಿರುವ ಸೂರ್ಯಕುಮಾರ್ ಯಾದವ್ ಒಟ್ಟು 890 ಪಾಯಿಂಟ್ಸ್‌ಗಳೊಂದಿಗೆ 2ನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮೊಹಮದ್ ರಿಜ್ವಾನ್‌ಗಿಂತಲೂ 54 ಹೆಚ್ಚು ಪಾಯಿಂಟ್ಸ್‌ಗಳನ್ನು ಕಲೆ ಹಾಕಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ–20ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಮತ್ತು 30 ರನ್ ಸಿಡಿಸಿದ್ದ ಹಾರ್ದಿಕ್ ಪಾಂಡ್ಯಾ 50ನೇ ಸ್ಥಾನ ಪಡೆದಿದ್ದಾರೆ.

ADVERTISEMENT

ವೇಗಿ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ಜಿಗಿದಿದ್ದರೆ, ಎಡಗೈ ವೇಗಿ ಅರ್ಶದೀಪ್ ಸಿಂಗ್ 21ನೇ ಸ್ಥಾನಕ್ಕೆ ಜಿಗಿದಿದ್ದಾರೆ.

8 ಸ್ಥಾನ ಜಿಗಿದಿರುವ ಸ್ಪಿನ್ನರ್ ಯಜುವೇಂದ್ರ ಚಾಹಲ್ 40ನೇ ಸ್ಥಾನಕ್ಕೆ ಏರಿದ್ದಾರೆ.

ಏಕದಿನ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ 6ನೇ ಸ್ಥಾನಕ್ಕೆ ಏರಿದರೆ, ನಾಯಕ ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.