ADVERTISEMENT

ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಹೆಸರಿಸಿದ ಕ್ಯಾಪ್ಟನ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಅಕ್ಟೋಬರ್ 2021, 16:17 IST
Last Updated 18 ಅಕ್ಟೋಬರ್ 2021, 16:17 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸುಳಿವು ಕೊಟ್ಟಿದ್ದಾರೆ.

ಅಬುಧಾಬಿಯಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟಾಸ್ ವೇಳೆಯಲ್ಲಿ ವಿರಾಟ್ ಕೊಹ್ಲಿ ಈ ಕುರಿತು ಮಾಹಿತಿ ನೀಡಿದರು.

'ಐಪಿಎಲ್‌ಗಿಂತ ಮೊದಲು ವಿಷಯಗಳು ವಿಭಿನ್ನವಾಗಿದ್ದವು. ಆದರೆ ಈಗ ಕೆ.ಎಲ್ ರಾಹುಲ್ ಅವರನ್ನು ಹೊರತಾಗಿ ನೋಡುವುದು ಕಷ್ಟ. ನಾನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತೇನೆ. ಸದ್ಯಕ್ಕೆ ಅಷ್ಟೇ ಹೇಳಬಲ್ಲೆ' ಎಂದು ತಿಳಿಸಿದ್ದಾರೆ.

ಇದರೊಂದಿಗೆ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್ ಓಪನರ್‌ ಆಗಿ ಕಣಕ್ಕಿಳಿಯಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.

ಈ ಮೊದಲು ರೋಹಿತ್ ಜೊತೆಗೆ ರಾಹುಲ್ ಅಥವಾ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬುದು ವರದಿಯಾಗಿತ್ತು.

ಏತನ್ಮಧ್ಯೆ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಿಲ್ಲ. ಪರಿಣಾಮ ರಾಹುಲ್ ಜೊತೆಗೆ ಕಿಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಐದು ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.