ADVERTISEMENT

T20WC: ರೋಹಿತ್ ನಾಯಕತ್ವದ ಅಡಿಯಲ್ಲಿ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2021, 12:03 IST
Last Updated 20 ಅಕ್ಟೋಬರ್ 2021, 12:03 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬುಧವಾರ ನಡೆಯುತ್ತಿರುವ ಅಭ್ಯಾಸ ಪಂದ್ಯವು ಭಾರತದ ಪಾಲಿಗೆ ಹಲವು ವಿಭಿನ್ನತೆಗಳಿಗೆ ಸಾಕ್ಷಿಯಾಗಿದೆ.

ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಅಡಿಯಲ್ಲಿ ಆಡುವ ಮೂಲಕ ಗಮನ ಸೆಳೆದಿದ್ದಾರೆ.

ಆರಂಭದಲ್ಲಿ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ತಿಳಿಸಲಾಗಿತ್ತು. ಇದರಿಂದಾಗಿ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿದ್ದರು.

ಆದರೆ ಭಾರತದ ಫೀಲ್ಡಿಂಗ್ ವೇಳೆ ಮೈದಾನದಲ್ಲಿ ಕಾಣಿಸಿಕೊಂಡ ವಿರಾಟ್, ಎರಡು ಓವರ್ ಬೌಲಿಂಗ್ ಮಾಡಿದರು. ಅಲ್ಲದೆ 12 ರನ್ ಬಿಟ್ಟುಕೊಟ್ಟು ವಿಕೆಟ್ ಪಡೆಯಲು ಯಶಸ್ವಿಯಾಗಲಿಲ್ಲ.

ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯ ಒಂದೇ ಒಂದು ಎಸೆತವನ್ನು ಎಸೆದಿಲ್ಲ. ಹಾರ್ದಿಕ್ ಪಾಂಡ್ಯ ಅವರನ್ನು ಓರ್ವ ಪರಿಪೂರ್ಣ ಬ್ಯಾಟ್ಸ್‌ಮನ್ ರೂಪದಲ್ಲಿ ಪರಿಗಣಿಸುವ ಸಾಧ್ಯತೆಯಿದೆ. ಇದರಿಂದಾಗಿ ವಿಶ್ವಕಪ್‌ನಲ್ಲೂ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವರೇ ಎಂಬುದು ಕುತೂಹಲ ಮೂಡಿಸಿದೆ.

ಏತನ್ಮಧ್ಯೆ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ ಸ್ಟೀವನ್ ಸ್ಮಿತ್ (57), ಮಾರ್ಕಸ್ ಸ್ಟೋಯಿನಿಸ್ (41*) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (37) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 152 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.