ADVERTISEMENT

ಟೆಸ್ಟ್ ಸರಣಿಯಿಂದ ರೋಹಿತ್‌ಗೆ ವಿಶ್ರಾಂತಿ; ಅಜಿಂಕ್ಯ ನಾಯಕತ್ವ

ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಕೊಹ್ಲಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 19:31 IST
Last Updated 11 ನವೆಂಬರ್ 2021, 19:31 IST
ಅಜಿಂಕ್ಯ ರಹಾನೆ
ಅಜಿಂಕ್ಯ ರಹಾನೆ   

ನವದೆಹಲಿ: ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೂಡ ಆಡುತ್ತಿಲ್ಲ. ಆದ್ದರಿಂದ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.

ಗುರುವಾರ ಪ್ರಕಟಿಸಲಾದ ತಂಡದಲ್ಲಿ ಮೂವರು ಕನ್ನಡಿಗರು ಇದ್ದಾರೆ. ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್ ಮತ್ತು ಮಧ್ಯಮವೇಗಿ ಪ್ರಸಿದ್ಧಕೃಷ್ಣ ಸ್ಥಾನ ಪಡೆದುಕೊಂಡಿದ್ದಾರೆ.

ಕಾನ್ಪುರ ಮತ್ತು ಮುಂಬೈನಲ್ಲಿ ನಡೆಯಲಿರುವ ಟೆಸ್ಟ್‌ ಪಂದ್ಯಗಳಲ್ಲಿ ವಿಕೆಟ್‌ಕೀಪರ್ ರಿಷಭ್ ಪಂತ್, ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಶಮಿ ಅವರೂ ಆಡುತ್ತಿಲ್ಲ. ವಿಕೆಟ್‌ಕೀಪರ್‌ಗಳಾದ ವೃದ್ಧಿಮಾನ್ ಸಹಾ ಮತ್ತು ಕೆ.ಎಸ್. ಭರತ್ ಸ್ಥಾನ ಪಡೆದಿದ್ದಾರೆ.

ADVERTISEMENT

ಇದೇ 17ರಿಂದ ಆರಂಭವಾಗಲಿರುವ ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವರು.

ತಂಡ: ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್‌ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕೆ.ಎಸ್. ಭರತ್, ರವೀಂದ್ರ ಜಡೇಜ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.