ADVERTISEMENT

ಟಿ20 ನಾಯಕತ್ವ ವಹಿಸಿಕೊಳ್ಳಲು ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಸೂಚನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಡಿಸೆಂಬರ್ 2022, 3:02 IST
Last Updated 22 ಡಿಸೆಂಬರ್ 2022, 3:02 IST
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ   

ನವದೆಹಲಿ: ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಚುಟುಕು ಕ್ರಿಕೆಟ್‌ (ಟಿ20) ತಂಡದ ನಾಯಕತ್ವ ವಹಿಸುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಚರ್ಚೆ ನಡೆಸಿದೆ ಎಂದು ವರದಿಯಾಗಿದೆ.

‘ಹಾರ್ದಿಕ್ ಪಾಂಡ್ಯರನ್ನು ಸಂಪರ್ಕಿಸಿ ಭಾರತದ ಟಿ20 ತಂಡದ ನಾಯಕತ್ವ ವಹಿಸಿಕೊಳ್ಳುವಂತೆ ಚರ್ಚಿಸಿದ್ದೇವೆ. ಈ ಕುರಿತು ಪ್ರತಿಕ್ರಿಯಿಸಿದ ಪಾಂಡ್ಯ, ಯೋಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಡಿ.21ರಂದು ನಡೆದ ಅಪೆಕ್ಸ್‌ ಸಮಿತಿ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಬಿಸಿಸಿಐ ಉನ್ನತ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ‌ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು.

ADVERTISEMENT

66 ಏಕದಿನ ಪಂದ್ಯಗಳನ್ನು ಆಡಿರುವ ಪಾಂಡ್ಯ 1,386 ರನ್ ಗಳಿಸಿದ್ದಾರೆ. 81 ಟಿ20 ಪಂದ್ಯಗಳಲ್ಲಿ 1,160 ರನ್ ಕಲೆ ಹಾಕಿದ್ದು, 11 ಟೆಸ್ಟ್‌ ಪಂದ್ಯಗಳಲ್ಲಿ 532 ರನ್ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.