ADVERTISEMENT

ಐದು ಪಂದ್ಯಗಳ ಟೆಸ್ಟ್ ಸರಣಿಗೆ ಇಂಗ್ಲೆಂಡ್‌ಗೆ ತೆರಳಿದ ಭಾರತ ತಂಡ

ಪಿಟಿಐ
Published 6 ಜೂನ್ 2025, 4:54 IST
Last Updated 6 ಜೂನ್ 2025, 4:54 IST
   

ಮುಂಬೈ: 2025-27ನೇ ಸಾಲಿನ ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಭಾಗವಾಗಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶುಭಮನ್ ಗಿಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್‌ಗೆ ತೆರಳಿದೆ.

ಜೂನ್ 20ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಸರಣಿಯು ಲೀಡ್ಸ್ ನ ಹೆಡಿಂಗ್ಲಿ, ಬರ್ಮಿಂಗ್‌ಹ್ಯಾಮ್‌ನ ಎಡ್ಜ್ ಬಾಸ್ಟನ್, ಲಂಡನ್‌ನ ಲಾರ್ಡ್ಸ್ ಮತ್ತು ದಿ ಓವಲ್ ಹಾಗೂ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯಗಳು ನಡೆಯಲಿವೆ.

ಈ ತಿಂಗಳ ಆರಂಭದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಇದು ಭಾರತದ ಮೊದಲ ದ್ವಿಪಕ್ಷೀಯ ಟೆಸ್ಟ್ ಸರಣಿಯಾಗಿದೆ. ಶುಭಮನ್ ಗಿಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದು, ಆರ್ ಅಶ್ವಿನ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿವೃತ್ತಿಯಿಂದಾಗಿ ತಂಡವು ಪರಿವರ್ತನೆಯ ಹಾದಿಯಲ್ಲಿದೆ.

ADVERTISEMENT

2007ರಿಂದ ಭಾರತ, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ತಯಾರಿಗಾಗಿ, ಇಂಗ್ಲೆಂಡ್ ಲಯನ್ಸ್ ವಿರುದ್ಧದ ಅಭ್ಯಾಸ ಪಂದ್ಯಗಳಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸಲು ಈಗಾಗಲೇ ಭಾರತದ ಹಲವು ಕ್ರಿಕೆಟಿಗರು ಇಂಗ್ಲೆಂಡ್‌ಗೆ ಹೋಗಿದ್ದಾರೆ. ಪ್ರವಾಸಿ ತಂಡದ ಉಳಿದ ಸದಸ್ಯರು ಇಂದು(ಜೂನ್ 6) ಇಂಗ್ಲೆಂಡ್‌ಗೆ ತಲುಪಲಿದ್ದಾರೆ.

ಟೆಸ್ಟ್ ಸರಣಿಗೆ ಮುನ್ನ, ಭಾರತ 'ಎ' ತಂಡವು ಪ್ರಸ್ತುತ ಇಂಗ್ಲೆಂಡ್ ಲಯನ್ಸ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಮೊದಲ ಪಂದ್ಯ ಡ್ರಾದಲ್ಲಿ ಕೊನೆಗೊಂಡರೆ, ಎರಡನೇ ಟೆಸ್ಟ್ ಜೂನ್ 6 (ಇಂದು) ನಾರ್ಥಾಂಪ್ಟನ್‌ನ ಕೌಂಟಿ ಮೈದಾನದಲ್ಲಿ ಆರಂಭವಾಗಲಿದೆ.

ಹೆಡಿಂಗ್ಲಿಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವನ್ನು ಘೋಷಿಸಲಾಗಿದೆ. ಕಳೆದ ವರ್ಷ ಭಾರತದಲ್ಲಿ 4-1 ಟೆಸ್ಟ್ ಸರಣಿ ಸೋಲಿನ ನಂತರ ಇಂಗ್ಲೆಂಡ್ ತಂಡವು ಹಲವು ಬದಲಾವಣೆಗಳನ್ನು ಕಂಡಿದೆ. ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ನಿವೃತ್ತರಾಗಿದ್ದಾರೆ. ಜಾನಿ ಬೆಸ್ಟೊ ಬೆನ್ ಫೋಕ್ಸ್ ಮತ್ತು ಓಲಿ ರಾಬಿನ್ಸನ್‌ರಂತಹ ಆಟಗಾರರನ್ನು ಕೈಬಿಡಲಾಗಿದೆ.

ಇಂಗ್ಲೆಂಡ್ ಸರಣಿಗೆ ಭಾರತ ಟೆಸ್ಟ್ ತಂಡ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.

ಮೊದಲ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಶೋಯಬ್ ಬಷೀರ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮಿ ಓವರ್ಟನ್, ಒಲ್ಲಿ ಪೋಪ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್ ಮತ್ತು ಕ್ರಿಸ್ ವೋಕ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.