ADVERTISEMENT

ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಗೆ ಟೀಂ ಇಂಡಿಯಾ, ನ್ಯೂಜಿಲೆಂಡ್ ಎದುರಾಳಿ

ಪಿಟಿಐ
Published 6 ಮಾರ್ಚ್ 2021, 12:12 IST
Last Updated 6 ಮಾರ್ಚ್ 2021, 12:12 IST
ಇಂಗ್ಲೆಂಡ್ ವಿರುದ್ಧ ಸರಣಿ ಗೆಲುವಿನ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು -ಎಎಫ್‌ಪಿ ಚಿತ್ರ
ಇಂಗ್ಲೆಂಡ್ ವಿರುದ್ಧ ಸರಣಿ ಗೆಲುವಿನ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು -ಎಎಫ್‌ಪಿ ಚಿತ್ರ   

ಅಹಮದಾಬಾದ್: ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯನ್ನು 3–1ರಿಂದ ಕೈವಶಪಡಿಸಿಕೊಳ್ಳುವ ಮೂಲಕ ಟೀಂ ಇಂಡಿಯಾವು ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ ಪ್ರವೇಶಿಸಿದೆ.

ಇದರೊಂದಿಗೆ, ಲಾರ್ಡ್ಸ್‌ನಲ್ಲಿ ಜೂನ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸುವುದು ಖಚಿತವಾಗಿದೆ.

ಸ್ಪಿನ್ ಮೋಡಿಗೆ ತತ್ತರಿಸಿದ ಇಂಗ್ಲೆಂಡ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆರ್.ಅಶ್ವಿನ್ ಹಾಗೂ ಅಕ್ಷರ್ ಪಟೇಲ್‌ ಸ್ಪಿನ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಇನ್ನಿಂಗ್ಸ್ ಹಾಗೂ 25 ರನ್‌ಗಳ ಅಂತರದಿಂದ ಸೋಲನುಭವಿಸಿದೆ.

ADVERTISEMENT

ಅಶ್ವಿನ್ ಅವರು 47 ರನ್ ನೀಡಿ 5 ವಿಕೆಟ್ ಪಡೆದರೆ ಅಕ್ಷರ್ ಪಟೇಟ್ 48 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲೂ ಅಕ್ಷರ್‌ ಪಟೇಲ್‌ 4 ವಿಕೆಟ್‌ ಗಳಿಸಿದ್ದರು.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 365 ರನ್‌ಗಳಿಸಿ 160 ರನ್‌ ಮುನ್ನಡೆ ಕಾಯ್ದುಕೊಂಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ ಗಳಿಸಿದ್ದ ಇಂಗ್ಲೆಂಡ್‌ಗೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 340 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಭಾರತದ ಪರ ರಿಷಭ್ ಪಂತ್ (101), ವಾಷಿಂಗ್ಟನ್ ಸುಂದರ್ (ಅಜೇಯ 96) ಹಾಗೂ ರೋಹಿತ್ ಶರ್ಮಾ (49) ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ತಂಡವು ಗಮನಾರ್ಹ ಮೊತ್ತ ಕಲೆಹಾಕುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.