
ಶುಭಮನ್ ಗಿಲ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಶಾರ್ದೂಲ್ ಠಾಕೂರ್
ಚಿತ್ರ: ಪ್ರಜಾವಾಣಿ ಫೈಲ್
ಕ್ಯಾನ್‌ಬೆರಾ: ಕುತ್ತಿಗೆ ನೋವಿನಿಂದ ಬಳಲುತ್ತಿರುವ ಭಾರತ ತಂಡದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಕ್ವಾಡ್ರೈಸ್‌ಪ್ಸ್ ಗಾಯದಿಂದಾಗಿ (Quadriceps Injury) ಸಿಡ್ನಿಯಲ್ಲಿ ನಡೆದ 3ನೇ ಏಕದಿನ ಪಂದ್ಯದಿಂದ ರೆಡ್ಡಿ ಹೊರಗುಳಿದಿದ್ದರು. ಇದೀಗ ಅವರಿಗೆ ಹೊಸ ಸಮಸ್ಯೆ ಕಾಣಿಸಿಕೊಂಡಿದೆ.
ರೆಡ್ಡಿ ಆರೋಗ್ಯದ ಕುರಿತು ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ‘ಅಡಿಲೇಡ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಎಡ ಕ್ವಾಡ್ರೈಸ್‌ಪ್ಸ್ ಗಾಯಕ್ಕೆ ಒಳಗಾಗಿದ್ದ ನಿತೀಶ್ ಕುಮಾರ್ ರೆಡ್ಡಿ ಚೇತರಿಸಿಕೊಳ್ಳುತ್ತಿದ್ದರು. ಈ ನಡುವೆ ಅವರಿಗೆ ಕುತ್ತಿಗೆ ಸೆಳೆತದ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಚೇತರಿಕೆಯ ಮೇಲ್ವಿಚಾರಣೆ ಮಾಡುತ್ತಿದೆ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.