ADVERTISEMENT

ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2021, 8:27 IST
Last Updated 6 ಡಿಸೆಂಬರ್ 2021, 8:27 IST
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಸಂಭ್ರಮದಲ್ಲಿ ಟೀಮ್ ಇಂಡಿಯಾ (ಬಿಸಿಸಿಐ ಚಿತ್ರ)
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಸಂಭ್ರಮದಲ್ಲಿ ಟೀಮ್ ಇಂಡಿಯಾ (ಬಿಸಿಸಿಐ ಚಿತ್ರ)   

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡವು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾವು 372 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ. ರ್‍ಯಾಂಕಿಂಗ್ ಪಟ್ಟಿಯಲ್ಲಿ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿದಿದೆ.

ಈ ವರ್ಷ ಜೂನ್‌ನಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಭಾರತ ಸೋಲನುಭವಿಸಿತ್ತು. ಅಮೋಘ ಆಟವಾಡಿದ್ದ ನ್ಯೂಜಿಲೆಂಡ್ ತಂಡವು ಟೆಸ್ಟ್ ಚಾಂಪಿಯನ್ ಆಗಿದ್ದಲ್ಲದೆ ರ್‍ಯಾಂಕಿಂಗ್‌ನಲ್ಲೂ ಅಗ್ರ ಸ್ಥಾನಕ್ಕೇರಿತ್ತು. ಇದೀಗ ಚಾಂಪಿಯನ್ ತಂಡವನ್ನೇ ಮಣಿಸುವ ಮೂಲಕ ಟೀಮ್ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ.

ತವರಿನಲ್ಲಿ ಸತತ 14ನೇ ಗೆಲುವು: ನ್ಯೂಜಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಆಡಿದ 14 ಟೆಸ್ಟ್ ಸರಣಿಗಳಲ್ಲಿ ಭಾರತವು ಸತತವಾಗಿ ಜಯಸಾಧಿಸಿದಂತಾಗಿದೆ.

ಐಸಿಸಿ ಟೆಸ್ಟ್ ರ್‍ಯಾಂಕ್ ಪಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.