ADVERTISEMENT

ಸೆಮಿಫೈನಲ್‌ನತ್ತ ಚಿತ್ತ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2021, 10:10 IST
Last Updated 2 ನವೆಂಬರ್ 2021, 10:10 IST
ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ
ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ   

ಅಬುಧಾಬಿ: ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯ ಮೊದಲ ಗುಂಪಿನ ಬಾಂಗ್ಲಾದೇಶ ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಟೂರ್ನಿಯಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ ಸೋತರೂ ನಂತರದ ಎರಡು ಪಂದ್ಯಗಳಲ್ಲಿ ಜಯದ ನಗೆ ಬೀರಿರುವ ತೆಂಬಾ ಬವುಮಾ ಬಳಗ ಈ ಪಂದ್ಯದಲ್ಲಿ ಗೆದ್ದರೆಸೆಮಿಫೈನಲ್ ಹಾದಿ ಸುಲಭವಾಗಲಿದೆ.

ಆಫ್ರಿಕಾ ತಂಡಗುಂಪಿನ ಪಾಯಿಂಟ್ ಪಟ್ಟಿಯಲ್ಲಿ ಈಗ ಎರಡನೇ ಸ್ಥಾನದಲ್ಲಿದೆ.ಆದರೆ, ಆಡಿರುವ ಮೂರೂ ಪಂದ್ಯಗಳಲ್ಲಿ ಸೋಲು ಕಂಡಿರುವ ಬಾಂಗ್ಲಾ ತಂಡ ಕೊನೇ ಸ್ಥಾನದಲ್ಲಿದೆ.

ADVERTISEMENT

ಆಫ್ರಿಕಾ ತಂಡ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ. ಆದರೆ, ಬಾಂಗ್ಲಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಗಾಯಾಳುಶಕೀಬ್ ಅಲ್ ಹಸನ್ ಮತ್ತು ವೇಗಿ ಮುಸ್ತಾಫಿಜುರ್‌ ರಹಮಾನ್‌ಆಡುತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.