ADVERTISEMENT

ಬಡಮಕ್ಕಳ ಚಿಕಿತ್ಸೆಗೆ ಸಚಿನ್‌ ನೆರವು

ಪಿಟಿಐ
Published 30 ನವೆಂಬರ್ 2020, 11:55 IST
Last Updated 30 ನವೆಂಬರ್ 2020, 11:55 IST
ಸಚಿನ್ ತೆಂಡೂಲ್ಕರ್‌–ಎಎಫ್‌ಪಿ ಚಿತ್ರ
ಸಚಿನ್ ತೆಂಡೂಲ್ಕರ್‌–ಎಎಫ್‌ಪಿ ಚಿತ್ರ   

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಅವರು ಬಡ ಕುಟುಂಬಗಳ, ಸರ್ಕಾರಿ ಹಾಗೂ ದತ್ತಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 100 ಮಕ್ಕಳ ಚಿಕಿತ್ಸೆಗೆ ನೆರವಾಗಿದ್ದಾರೆ.

ಏಕಂ ಫೌಂಡೇಷನ್‌ನೊಂದಿಗೆ ಕೈಜೋಡಿಸಿರುವ ಅವರು ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಮಕ್ಕಳಿಗೆ ಅವರು ಸಹಾಯಹಸ್ತ ಚಾಚಿದ್ದಾರೆ. .

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ, ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ವೈದ್ಯಕೀಯ ವೆಚ್ಚವನ್ನು ಭರಿಸಲು ಸಾಧ್ಯವಾಗದ ಮಕ್ಕಳ ನೆರವಿಗೆ ತೆಂಡೂಲ್ಕರ್‌ ಫೌಂಡೇಷನ್‌ ಧಾವಿಸಿದೆ.

ADVERTISEMENT

ಈ ತಿಂಗಳ ಆರಂಭದಲ್ಲಿ ಅಸ್ಸಾಂನ ಕರೀಮ್‌ಗನಿ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸೌಲಭ್ಯಗಳನ್ನು ಒದಗಿಸಿದ್ದರು. ಪ್ರತಿವರ್ಷ 2,000 ಮಕ್ಕಳಿಗೆ ಇದರಿಂದ ಅನುಕೂಲವಾಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.