ಹೈದರಾಬಾದ್: ಕಾಶ್ಮೀರದ ಪೆಹಲ್‌ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತರಾದವರಿಗೆ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಶ್ರದ್ಧಾಂಜಲಿ ಸಲ್ಲಿಸಿದರು.
ಉಪ್ಪಳದ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಐಪಿಎಲ್ ಪಂದ್ಯದ ಆರಂಭಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ಸಾಲಾಗಿ ನಿಂತು ಒಂದು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. ನಾಯಕ ಹಾರ್ದಿಕ್ ಪಾಂಡ್ಯ, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮಿನ್ಸ್ ಅವರು ಭಯೋತ್ಪಾದಕರ ದಾಳಿ ಅಮಾನವೀಯ ಎಂದು ಖಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.