
ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ–20 ಸರಣಿಯಿಂದ ಬ್ಯಾಟರ್ ತಿಲಕ್ ವರ್ಮಾ ಹೊರಬಿದ್ದಿದ್ದಾರೆ. ಅವರ ಬದಲಿಗೆ ಶ್ರೇಯಸ್ ಅಯ್ಯರ್‌ಗೆ ಅವಕಾಶ ನೀಡಲಾಗಿದೆ.
ಇತ್ತೀಚೆಗೆ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಿಲಕ್ ವರ್ಮಾ, ಬೆಂಗಳೂರಿನಲ್ಲಿರುವ ಶ್ರೇಷ್ಠತಾ ಕೇಂದ್ರದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಅವರು ಇನ್ನೂ ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ, ಕೊನೆಯ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದ ಅವರು ತಂಡದಿಂದ ಹೊರಬಿದಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.
ಟಿ–20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾದ ನಂತರ ಫೆ.3ರಂದು ಮುಂಬೈನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಮೊದಲ 3 ಪಂದ್ಯಗಳಿಗಷ್ಟೇ ಆಯ್ಕೆ ಆಗಿದ್ದ, ಶ್ರೇಯಸ್ ಅಯ್ಯರ್‌ಗೆ ತಂಡದಲ್ಲಿ ಮುಂದುವರಿಯುವಂತೆ ಬಿಸಿಸಿಐ ಸೂಚನೆ ನೀಡಿದೆ.
ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಭಾರತವು 3–0 ಅಲ್ಲಿ ಮುನ್ನಡೆಯಲ್ಲಿದೆ. ನಾಲ್ಕನೇ ಟಿ–20 ಪಂದ್ಯವು ಜ.28ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.