ADVERTISEMENT

ಚಾಂಪಿಯನ್ಸ್‌ ಟ್ರೋಫಿ: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಅಗ್ರ 7 ತಂಡಗಳಿಗೆ ಅವಕಾಶ

ಪಿಟಿಐ
Published 29 ಅಕ್ಟೋಬರ್ 2023, 19:35 IST
Last Updated 29 ಅಕ್ಟೋಬರ್ 2023, 19:35 IST
<div class="paragraphs"><p>ವಿಶ್ವಕಪ್‌</p></div>

ವಿಶ್ವಕಪ್‌

   

ಚಿತ್ರ

ನವದೆಹಲಿ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಅಗ್ರ ಏಳು ಸ್ಥಾನಗಳನ್ನು ಪಡೆಯುವ ತಂಡಗಳು ಆತಿಥೇಯ ಪಾಕಿಸ್ತಾನದ ಜತೆ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಆಡಲು ಅವಕಾಶ ಪಡೆಯಲಿವೆ.

ADVERTISEMENT

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಅರ್ಹತೆಯ ಮಾನದಂಡವನ್ನು ಐಸಿಸಿ 2021 ರಲ್ಲಿ ಬದಲಿಸಿತ್ತು. ಟೂರ್ನಿಯ ಪಂದ್ಯಗಳು ಹಳೆಯ ಮಾದರಿಯಂತೆಯೇ ನಡೆಯಲಿದೆ. ಎಂಟು ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿ ಲೀಗ್‌ ಪಂದ್ಯಗಳನ್ನು ಆಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ವಿಶ್ವಕಪ್‌ ಟೂರ್ನಿಯ ಪಾಯಿಂಟ್‌ ಪಟ್ಟಿಯಲ್ಲಿ 9 ಹಾಗೂ 10ನೇ ಸ್ಥಾನಗಳಲ್ಲಿರುವ ಬಾಂಗ್ಲಾದೇಶ ಮತ್ತು ಇಂಗ್ಲೆಂಡ್‌ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕು.

ಏಳು ಮತ್ತು ಎಂಟನೇ ಸ್ಥಾನದಲ್ಲಿರುವ ಅಫ್ಗಾನಿಸ್ತಾನ ಮತ್ತು ನೆದರ್ಲೆಂಡ್ಸ್‌ ತಂಡಗಳು ಇನ್ನುಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಅದೇ ಸ್ಥಾನವನ್ನು ಉಳಿಸಿಕೊಂಡರೆ, ಚಾಂಪಿಯನ್ಸ್‌ ಟ್ರೋಫಿಗೆ ಅರ್ಹತೆ ಪಡೆಯುವ ಅವಕಾಶ ಹೊಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.