ಶಾರ್ಜಾ: ಮಹಿಳಾ ಚಾಲೆಂಜ್ ಟೂರ್ನಿಯ ಮೂರನೇ ಹಣಾಹಣಿಯಲ್ಲಿ ಟ್ರೇಲ್ಬ್ಲೇಜರ್ಸ್ ವಿರುದ್ಧ ಟಾಸ್ ಗೆದ್ದಿರುವ ಸೂಪರ್ನೋವಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಬ್ಲೇಜರ್ಸ್ ಪಡೆ ತನ್ನ ಮೊದಲ ಪಂದ್ಯದಲ್ಲಿ ವೆಲೋಸಿಟಿ ವಿರುದ್ಧ 9 ವಿಕೆಟ್ ಅಂತರದ ಗೆಲುವು ಸಾಧಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ ಸೂಪರ್ನೋವಾಸ್ ಸ್ಥಿತಿ ಇದಕ್ಕೆ ಭಿನ್ನವಾಗಿದೆ. ಈ ತಂಡ ತನ್ನ ಮೊದಲ ಪಂದ್ಯದಲ್ಲಿ ವೆಲೋಸಿಟಿ ವಿರುದ್ಧ ಸೋಲು ಕಂಡಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.ಹೀಗಾಗಿಫೈನಲ್ ತಲುಪಬೇಕಾದರೆ ಇಲ್ಲಿ ಉತ್ತಮ ಅಂತರದಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
ಈ ಪಂದ್ಯದಲ್ಲಿ ಸೂಪರ್ನೋವಾಸ್ ಸೋಲುಕಂಡರೆ, ವೆಲೋಸಿಟಿ ಹಾಗೂ ಬ್ಲೇಜರ್ಸ್ ತಂಡಗಳು ನವೆಂಬರ್ 9 ರಂದು ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.