ADVERTISEMENT

ಕ್ರಿಕೆಟ್‌ ವೀಕ್ಷಕ ವಿವರಣೆಯನ್ನು ಕನ್ನಡದಲ್ಲೇ ನೀಡಲು ನೆಟ್ಟಿಗರ ಒತ್ತಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2020, 4:45 IST
Last Updated 27 ನವೆಂಬರ್ 2020, 4:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕ್ರಿಕೆಟ್‌ ವೀಕ್ಷಕ ವಿವರಣೆಯನ್ನು ಕನ್ನಡದಲ್ಲೇ ನೀಡಬೇಕೆಂದು ಆಗ್ರಹಿಸಿ ಆನ್‌ಲೈನ್ ಅಭಿಯಾನವು ನಡೆದಿದೆ.

#ಕನ್ನಡದಲ್ಲಿ_ಕಾಮೆಂಟರಿ, #CommentaryinKannada ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಒಂಬತ್ತು ಸಾವಿರಕ್ಕೂ ಅಧಿಕ ಟ್ವೀಟ್‌ಗಳನ್ನು ಮಾಡಲಾಗಿದೆ.

ಸಿಡ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಇದರ ನೇರಪ್ರಸಾರವನ್ನು ಸೋನಿ ಸ್ಪೋರ್ಟ್ಸ್‌ ಇಂಡಿಯಾ ಮಾಡುತ್ತಿದೆ. ಪಂದ್ಯದ ವೀಕ್ಷಕ ವಿವರಣೆಯನ್ನು ಇಂಗ್ಲಿಷ್‌, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಕೊಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಅಭಿಯಾನ ಆರಂಭಿಸಿರುವ ಟ್ವೀಟಿಗರು ಕನ್ನಡದಲ್ಲೇ ವೀಕ್ಷಕ ವಿವರಣೆ ನೀಡಬೇಕೆಂದು ಸೋನಿ ಸ್ಪೋರ್ಟ್ಸ್‌ ಇಂಡಿಯಾ ಚಾನಲ್‌ಗೆ ಒತ್ತಾಯಿಸಿದ್ದಾರೆ.

ADVERTISEMENT

ಸ್ಟಾರ್ ಸ್ಪೋರ್ಟ್ಸ್ ಈಗಾಗಲೇ ಕನ್ನಡ ಚಾನೆಲ್ ಅನ್ನು ಪ್ರಾರಂಭಿಸಿದ್ದು, ಪಂದ್ಯಗಳ ವೀಕ್ಷಕ ವಿವರಣೆಯನ್ನು ಕನ್ನಡದಲ್ಲೇ ನೀಡುತ್ತಿದೆ. ಅದೇ ರೀತಿಯಾಗಿ ಸೋನಿ ಸ್ಪೋರ್ಟ್ಸ್‌ ಇಂಡಿಯಾ ಕನ್ನಡದಲ್ಲೇ ವೀಕ್ಷಕ ವಿವರಣೆ ನೀಡಬೇಕೆಂದು ಟ್ವೀಟಿಗರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.