ಮುಂಬೈ: ವೆಸ್ಟ್ ಇಂಡೀಸ್ ಎದುರಿನ ಟ್ವೆಂಟಿ–20 ಪಂದ್ಯ ಮುಂಬೈನಲ್ಲಿ ಡಿಸೆಂಬರ್ 6ರ ಬದಲು 11ರಂದು ನಡೆಯಲಿದ್ದು 6ರ ಪಂದ್ಯವನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ.
ಬಾಬರಿ ಮಸೀದಿ ದ್ವಂಸಗೊಳಿಸಿದ ದಿನವಾದ ಡಿ.6ರಂದು ಮುಂಬೈಯಲ್ಲಿ ಭದ್ರತೆಗಾಗಿ ಹೆಚ್ಚು ಪೊಲೀಸರನ್ನು ನಿಯೋಜಿಸಲಿರುವುದರಿಂದ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂದು ಪೊಲೀಸರು ತಿಳಿಸಿದ ಕಾರಣ ಈ ಬದಲಾವಣೆಯನ್ನು ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.