
ಪ್ರಸ್ತುತ ದಿನಗಳಲ್ಲಿ ತನ್ನ ಬ್ಯಾಟಿಂಗ್ ಮೂಲಕವೇ ಜಗತ್ತನನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿರುವ ಭಾರತ ಕ್ರಿಕೆಟ್ ತಾರೆ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ರೈಸಿಂಗ್ ಸ್ಟಾರ್ ಏಷ್ಯಾ ಕಪ್ ಟಿ20 ಮಾದರಿಯ ಟೂರ್ನಿಯಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿದ್ದ ವೈಭವ್, ಇದೀಗ 19 ವರ್ಷದೊಳಗಿನವರ ಏಕದಿನ ಮಾದರಿಯ ಏಷ್ಯಾಕಪ್‌ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ.
ಕೇವಲ 56 ಎಸೆತಗಳಲ್ಲಿ ಶತಕ
ಯುಎಇ ವಿರುದ್ಧ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಮಾದರಿಯ ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 56 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಶತಕದ ಬಳಿಕ ಇನ್ನಷ್ಟು ಅಬ್ಬರದ ಬ್ಯಾಟಿಂಗ್ ನಡೆಸಿದ ವೈಭವ್, ಅಂತಿಮವಾಗಿ 95 ಎಸೆತಗಳಲ್ಲಿ 171 ರನ್ ಸಿಡಿಸಿ ಉದೀಶ್ ಸೂರಿಗೆ ವಿಕೆಟ್ ಒಪ್ಪಿಸಿ ಹೊರನಡೆದರು.
14 ಸಿಕ್ಸರ್, 9 ಬೌಂಡರಿ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಆಯುಷ್ ಮ್ಹಾತ್ರೆ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ, ಆರೋನ್ ಜಾರ್ಜ್ ಜೊತೆಗೂಡಿದ ವೈಭವ್ ಸೂರ್ಯವಂಶಿ ಯುಎಇ ಬೌಲರ್‌ಗಳ ಬೆಂಡೆತ್ತಿದರು. ತಮ್ಮ ಸ್ಫೋಟಕ ಇನಿಂಗ್ಸ್‌ನಲ್ಲಿ 14 ಸಿಕ್ಸರ್ ಹಾಗೂ 9 ಅಮೋಘ ಬೌಂಡರಿ ಸಿಡಿಸಿ 171ರನ್ ಗಳಿಸಿ ಔಟ್ ಆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.