ADVERTISEMENT

U19 World Cup Final: ಭಾರತಕ್ಕೆ 190 ರನ್ ಗುರಿ ನೀಡಿದ ಇಂಗ್ಲೆಂಡ್

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2022, 16:47 IST
Last Updated 5 ಫೆಬ್ರುವರಿ 2022, 16:47 IST
   

ಆ್ಯಂಟಿಗುವಾ: 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 44.5 ಓವರ್‌ಗಳಲ್ಲಿ 189 ರನ್‌ಗಳಿಗೆ ಆಲೌಟ್ ಆಗಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಆರಂಭದಲ್ಲೇ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭ ನೆಲ ಕಚ್ಚಿ ನಿಂತು ತಂಡಕ್ಕೆ ಆಸರೆಯಾದ ಜೇಮ್ಸ್ ರೋ 12 ಬೌಂಡರಿ ಸಹಿತ 95 ರನ್ ಗಳಿಸಿ ತಂಡದ ಗೌರವಾನ್ವಿತ ಮೊತ್ತಕ್ಕೆ ಕಾರಣರಾದರು.

ಉಳಿದಂತೆ ಜಾರ್ಜ್ ಥಾಮಸ್ 27 ಮತ್ತು ಜೇಮ್ಸ್ ಸೇಲ್ಸ್ 34 ರನ್ ಗಳಿಸಿದ್ದು ಬಿಟ್ಟರೆ ಬೇರೆ ಯಾವ ಬ್ಯಾಟರ್‌ಗಳು ಪರಿಣಾಮಕಾರಿಯಾಗಲಿಲ್ಲ.

ADVERTISEMENT

ಭಾರತದ ಪರ ಅತ್ಯುತ್ತಮ ಬೌಲಿಂಗ್ ಸಂಘಟಿಸಿದ ರಾಜ್ ಬವ 19.5 ಓವರ್‌ಗಳಲ್ಲಿ 31 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟಿಂಗ್ ಪಡೆಯನ್ನು ಕಾಡಿದರು. ರಾಜ್‌ಗೆ ಉತ್ತಮ ಸಾಥ್ ನೀಡಿದ ರವಿಕುಮಾರ್ 34 ರನ್ ನೀಡಿ 4 ವಿಕೆಟ್ ಉರುಳಿಸಿದರು.

ಸತತ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಭಾರತ ತಂಡ ಈ ಪಂದ್ಯ ಗೆದ್ದರೆ ಐದನೇ ಬಾರಿಗೆ 19 ವರ್ಷದೊಳಗಿನವರ ವಿಶ್ವಕಪ್ ಕಿರೀಟ ಮುಡುಗೇರಿಸಿದ ಸಾಧನೆ ಮಾಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.