

ಹರಾರೆ: 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಅಫ್ಗಾನಿಸ್ತಾನ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಟೂರ್ನಿಯಲ್ಲಿ ಅಜೇಯವಾಗಿ ಉಳಿದಿರುವ ಭಾರತ ಯುವಪಡೆಯು, ಈ ಪಂದ್ಯ ಗೆದ್ದು ಫೈನಲ್ ಪ್ರವೇಶಿಸುವ ಮೂಲಕ 6ನೇ ಬಾರಿ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ, ಸೆಮಿಸ್‌ನಲ್ಲೂ ಆಡಲಿದೆ.
ಇನ್ನೊಂದೆಡೆ, ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಅಫ್ಗಾನಿಸ್ತಾನ ಯುವಪಡೆಯು ಕೂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.