ಹರಾರೆ: 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಗಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 310 ರನ್ ಕಲೆಹಾಕಿದೆ. ಆ ಮೂಲಕ ಭಾರತದ ಗೆಲುವಿಗೆ 311 ರನ್ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಗಾನಿಸ್ತಾನ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಆರಂಭಿಕರಾದ ಉಸ್ಮಾನ್ ಸಾದತ್ (39) ಹಾಗೂ ಖಾಲಿದ್ ಅಹಮದ್‌ಝೈ (31) ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ನಂತರ ಜೊತೆಯಾದ ಫೈಸಲ್ ಶಿನೋಜಾದ್ (110 ರನ್, 93 ಎ, 4X15) ಹಾಗೂ ಉಜೈರುಲ್ಲಾ ನಯಾಝೈ (101 ರನ್, 86ಎ, 4X12, 6X2) ಭಾರತೀಯ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಈ ಇಬ್ಬರ ಅಮೋಘ ಜೊತೆಯಾಟದ ನೆರವಿನಿಂದ ಅಫ್ಗಾನಿಸ್ತಾನ ತಂಡ 300ರ ಗಡಿ ದಾಟಿತು.
ಭಾರತದ ಪರ ದೀಪೇಶ್ ದೇವೇಂದ್ರನ್ ಹಾಗೂ ಕನಿಷ್ಕ್ ಚೌಹಾನ್ ತಲಾ ಎರಡು ವಿಕೆಟ್ ಪಡೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.