ADVERTISEMENT

‘ಏಕತೆಯೇ ವಾಹನ; ಮಹಾತ್ವಾಕಾಂಕ್ಷೆಯೇ ಇಂಧನ’: ತಂಡದ ಚಿತ್ರ ಹಂಚಿಕೊಂಡ ಕೊಹ್ಲಿ

ಏಜೆನ್ಸೀಸ್
Published 26 ಸೆಪ್ಟೆಂಬರ್ 2020, 13:27 IST
Last Updated 26 ಸೆಪ್ಟೆಂಬರ್ 2020, 13:27 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ವಿರಾಟ್‌ ಕೊಹ್ಲಿ ನೇತೃತ್ವದರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕಿಂಗ್ಸ್‌ ಇಲವೆನ್‌ ಪಂಜಾಬ್‌ ತಂಡದ ವಿರುದ್ಧ ಇತ್ತೀಚೆಗೆ ನಡೆದ ಪಂದ್ಯದಲ್ಲಿ 107 ರನ್‌ ಅಂತರದಿಂದ ಹೀನಾಯವಾಗಿ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಪಂಜಾಬ್‌ ತಂಡದ ನಾಯಕ ಕೆ.ಎಲ್‌.ರಾಹುಲ್‌ ನೀಡಿದ್ದ ಎರಡು ಎರಡು ಕ್ಯಾಚ್‌ಗಳನ್ನು ಬಿಟ್ಟಿದ್ದ ವಿರಾಟ್‌, ಬ್ಯಾಟಿಂಗ್‌ನಲ್ಲಿಯೂ ವಿಫಲವಾಗಿದ್ದರು.

ವಿರಾಟ್‌ ಹಾಗೂ ಆರ್‌ಸಿಬಿಯ ಕೆಟ್ಟ ಪ್ರದರ್ಶನದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಇದೀಗ ಇನ್‌ಸ್ಟಾಗ್ರಾಂನಲ್ಲಿ ತಂಡದ ಚಿತ್ರವೊಂದನ್ನು ಹಂಚಿಕೊಂಡಿರುವ ವಿರಾಟ್‌,‘ಏಕತೆಯೇ ವಾಹನ; ಮಹಾತ್ವಾಕಾಂಕ್ಷೆಯೇ ಇಂಧನ’ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ತನ್ನ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಸವಾಲನ್ನು ಎದುರಿಸಲು ಆರ್‌ಸಿಬಿ ಸಜ್ಜಾಗಿರುವುದಾಗಿ ತಿಳಿಸಿದ್ದಾರೆ.

ಗುರುವಾರ ನಡೆದ ಪಂದ್ಯದಲ್ಲಿಭರ್ಜರಿ ಶತಕ ಗಳಿಸಿದ್ದ ಪಂಜಾಬ್‌ ತಂಡದ ನಾಯಕ ಕೆಎಲ್‌ ರಾಹುಲ್90 ರನ್‌ ಆಸುಪಾಸಿನಲ್ಲಿದ್ದಾಗ ಎರಡು ಬಾರಿ ಕ್ಯಾಚ್‌ ನೀಡಿದ್ದರು. ಅವುಗಳನ್ನು ವಿರಾಟ್‌ ನೆಲಕ್ಕೆ ಹಾಕಿದ್ದರು. ಬಳಿಕ ರಾಹುಲ್‌ ಅಜೇಯ 132ರನ್‌ ಸಿಡಿಸಿ ಮಿಂಚಿದ್ದರು. ಇದರ ಪರಿಣಾಮವಾಗಿ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 206 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತ್ತು. ಈ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಕೇವಲ 109 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ 107 ರನ್‌ಗಳ ಸೋಲು ಒಪ್ಪಿಕೊಂಡಿತ್ತು. ಕೊಹ್ಲಿ ಬ್ಯಾಟಿಂಗ್‌ನಲ್ಲಿಯೂ ವಿಫಲರಾಗಿದ್ದರು.

ADVERTISEMENT

ಆರ್‌ಸಿಬಿ ಈವರೆಗೆ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು ಒಂದು ಗೆಲುವು ಮತ್ತು ಸೋಲು ಕಂಡಿದೆ. ತಂಡದ ಪ್ರಮುಖ ವೇಗಿಗಳಾದ ಉಮೇಶ್ ಯಾದವ್‌ ಮತ್ತು ಡೇಲ್‌ ಸ್ಟೇಯ್ನ್‌ ದುಬಾರಿಯಾಗಿದ್ದಾರೆ. ಎರಡು ಪಂದ್ಯಗಳಲ್ಲಿ 16 ಓವರ್‌ ಬೌಲಿಂಗ್‌ ಮಾಡಿದ್ದ ಈ ಇಬ್ಬರು ಬರೋಬ್ಬರಿ 173 ರನ್‌ ಬಿಟ್ಟುಕೊಟ್ಟಿರುವುದು ಕೊಹ್ಲಿಗೆ ತಲೆನೋವಾಗಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಕೆಲ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.